ಜೂ. 5ರಿಂದ ಬೀದಿಬದಿ ವ್ಯಾಪಾರ ತೆರವು ಕಾರ್ಯಾಚರಣೆ

Update: 2020-06-03 17:25 GMT

ಮಂಗಳೂರು, ಜೂ.3: ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿರುವ ಫುಟ್‌ಪಾತ್‌ಗಳನ್ನು ಅತಿಕ್ರಮಿಸಿ ಹಲವು ಅಂಗಡಿ ಹಾಗೂ ಹೂವು, ಹಣ್ಣು, ತರಕಾರಿ ಮತ್ತು ಇನ್ನಿತರ ವಸ್ತುಗಳನ್ನು ಮಾರಾಟ ಮಾಡುತ್ತಿರುವುದರಿಂದ ಜನರ ಓಡಾಟಕ್ಕೆ ಸಮಸ್ಯೆಯಾಗಿದೆ. ಈ ಕುರಿತು ಪಾಲಿಕೆಗೆ ಬಂದ ದೂರಿನ ಹಿನ್ನೆಲೆಯಲ್ಲಿ ಜೂ.5ರಿಂದ ಟೈಗರ್ ಕಾರ್ಯಾಚರಣೆ ಆರಂಭವಾಗಲಿದೆ.

ಕಾರ್ಯಾಚರಣೆಯ ವೇಳೆ ಫುಟ್‌ಪಾತ್‌ನಲ್ಲಿರುವ ಅಂಗಡಿಗಳನ್ನು ತೆರವುಗೊಳಿಸಲಾಗುವುದು ಮತ್ತು ಇದರ ನಷ್ಟಕ್ಕೆ ವ್ಯಾಪಾರಸ್ಥರೇ ಜವಾಬ್ದಾರರಾಗಿರುತ್ತಾರೆ ಎಂದು ಮೇಯರ್ ದಿವಾಕರ್ ಪಾಂಡೇಶ್ವರ ತಿಳಿಸಿದ್ದಾರೆ.

ಪಾಲಿಕೆ ವ್ಯಾಪ್ತಿಯ ರಸ್ತೆ ಬದಿ ಮತ್ತು ಫುಟ್‌ಪಾತ್‌ನಲ್ಲಿ ಇನ್ನು ಮುಂದೆ ಯಾವುದನ್ನೂ ಮಾರಾಟ ಮಾಡದಂತೆ ನಿರ್ಬಂಧಿಸಲಾಗಿದೆ. ಈ ಸೂಚನೆಯನ್ನು ಮೀರಿ ಮಾರಾಟ ಮಾಡಿದಲ್ಲಿ ವಸ್ತುಗಳನ್ನು ಪಾಲಿಕೆಯ ವಶಕ್ಕೆ ಪಡೆದುಕೊಳ್ಳಲಾಗುವುದು ಮತ್ತು ಅದನ್ನು ಹಿಂದಿರುಗಿ ಸಲಾಗುವುದಿಲ್ಲ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News