ಮಂಗಳೂರು: ಸೆಂಟ್ರಲ್ ಮಾರುಕಟ್ಟೆ ತಡೆಯಾಜ್ಞೆ ಯಥಾ

Update: 2020-06-03 17:53 GMT

ಮಂಗಳೂರು, ಜೂ.3: ಸೆಂಟ್ರಲ್ ಮಾರುಕಟ್ಟೆ ಕಟ್ಟಡ ಕೆಡಹುವುದು ಮತ್ತು ವ್ಯಾಪಾರಿಗಳನ್ನು ಸ್ಥಳಾಂತರಿಸುವುದನ್ನು ವಿರೋಧಿಸಿ ವ್ಯಾಪಾರಸ್ಥರು ಉಚ್ಚ ನ್ಯಾಯಾಲಯದಲ್ಲಿ ಹೈಕೋರ್ಟ್‌ನಲ್ಲಿ ಹೂಡಿದ್ದ ದಾವೆಗೆ ತಡೆಯಾಜ್ಞೆ ಸಿಕ್ಕಿದ್ದು, ಬುಧವಾರ ವಿಚಾರಣೆ ನಡೆದು ಪಾಲಿಕೆ ವ್ಯಾಪಾರಿಗಳಿಗೆ ಪರ್ಯಾಯ ವ್ಯವಸ್ಥೆ ಮಾಡಿ ಕೊಡದ ಹಿನ್ನೆಲೆಯಲ್ಲಿ ತಡೆಯಾಜ್ಞೆ ಯಥಾ ಪ್ರಕಾರ ಮುಂದುವರಿಯಲಿದೆ ಎಂದು ಹೈಕೋರ್ಟ್ ಕೋರ್ಟ್ ಹೇಳಿದೆ.

ತಡೆಯಾಜ್ಞೆ ತೆರವು ಮಾಡುವಂತೆ ಮನಪಾ ವಕೀಲರು ವಾದ ಮಂಡಿಸಿದ್ದು, ಇದಕ್ಕೆ ಪ್ರತಿಯಾಗಿ ವ್ಯಾಪಾರಸ್ಥರಿಗೆ ಪರ್ಯಾಯವಾಗಿ ಸಮರ್ಪಕ ವ್ಯವಸ್ಥೆ ಮಾಡದೆ ಇರುವುದರಿಂದ ತಡೆಯಾಜ್ಞೆ ಮುಂದುವರಿಸುವಂತೆ ವ್ಯಾಪಾರಸ್ಥರ ಪರ ವಕೀಲರು ವಾದ ಮಂಡಿಸಿದರು. ಇದಕ್ಕೆ ನ್ಯಾಯಾಲಯ ಸಮ್ಮತಿಸಿದೆ ಎಂದು ದೂರುದಾರ ಹನೀಫ್ ಮಲಾರ್ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಸೆಂಟ್ರಲ್ ಮಾರುಕಟ್ಟೆಯ ವ್ಯಾಪಾರಸ್ಥರು ಗುರುವಾರ ಪೊಲೀಸ್ ಆಯುಕ್ತ ಡಾ.ಹರ್ಷ ಪಿ.ಎಸ್.ಅವರನ್ನು ಭೇಟಿಯಾಗಿ ಸೆಂಟ್ರಲ್ ಮಾರುಕಟ್ಟೆಯಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿ ಕೊಡಬೇಕು ಎಂದು ಮನವಿ ಮಾಡಲಿದ್ದಾರೆ ಎಂದವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News