ಕೊರೋನ ಸೋಂಕು ನಿಯಂತ್ರಣ ಮೀರಿ ಹರಡುತ್ತಿದೆ, ಇನ್ನೆರಡು ತಿಂಗಳು ಶಾಲೆ ಆರಂಭ ಬೇಡ: ಮಾಜಿ ಸಿಎಂ ಸಿದ್ದರಾಮಯ್ಯ

Update: 2020-06-04 05:24 GMT

ಬೆಂಗಳೂರು: ರಾಜ್ಯದಲ್ಲಿ ಕೊರೋನ ಸೋಂಕು ನಿಯಂತ್ರಣ ಮೀರಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕನಿಷ್ಟ ಇನ್ನೆರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಎರಡು ತಿಂಗಳ ನಂತರ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ಶಾಲೆಗಳ ಪುನರಾರಂಭದ ಬಗ್ಗೆ ಯೋಚನೆ ಮಾಡುವುದು ಸೂಕ್ತ ಎಂದು ತಿಳಿಸಿದ್ದಾರೆ. ಅಲ್ಲದೆ, ಇದರಿಂದ ಪೋಷಕರು ಆತಂಕಕ್ಕೆ ಒಳಗಾಗಿದ್ದು, ಈ ಪ್ರಸ್ತಾವವನ್ನು ವಿರೋಧಿ ಸುತ್ತಿರುವುದನ್ನು ಮುಖ್ಯಮಂತ್ರಿ ಗಮನಿಸಬೇಕು. ಬ್ರಿಟನ್, ಫ್ರಾನ್ಸ್, ಇಟಲಿ ಸೇರಿದಂತೆ ಬೇರೆ ದೇಶಗಳಲ್ಲಿ ಶಾಲೆಗಳನ್ನು ಪುನರಾರಂಭಿ ಸಿದ ನಂತರ ವಿದ್ಯಾರ್ಥಿಗಳಿಗೆ ಕೊರೋನ ಸೋಂಕು ತಗಲಿರುವುದು ವರದಿಯಾಗುತ್ತಿವೆ ಎಂದು ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News