ದ.ಕ. ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಮೋಹನ್ ಗೌಡ ಕಲ್ಮಂಜ ನೇಮಕ

Update: 2020-06-04 17:54 GMT

ಬಂಟ್ವಾಳ, ಜೂ. 4: ದಕ್ಷಿಣ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಉದ್ಯಮಿ ಮೋಹನ್ ಗೌಡ ಕಲ್ಮಂಜ ನೇಮಕಗೊಂಡಿದ್ದಾರೆ. 

ವಿಧಾನ ಪರಿಷತ್ ಸದಸ್ಯರೂ ಆದ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಚಿವ ಬಿ.ರಮಾನಾಥ ರೈ ಮತ್ತು ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ರಾಜ್ಯ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಸಚಿನ್ ಮಿಗಾ ಅವರು ನೇಮಕಗೊಳಿಸಿ ಆದೇಶ ನೀಡಿದ್ದಾರೆ.

ಮೋಹನ್ ಗೌಡ ಬೆಳ್ತಂಗಡಿ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಕಳೆದ ಲೋಕಸಭಾ ಮತ್ತು ವಿಧಾನ ಸಭಾ ಚುನಾವಣಾ ವೇಳೆ ಪ್ರಚಾರ ಸಮಿತಿ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News