ವಲಸಿರಿಗೆ ಉಚಿತವಾಗಿ ಆಹಾರಧಾನ್ಯ ವಿತರಣೆ

Update: 2020-06-04 12:17 GMT

ಉಡುಪಿ, ಜೂ.4: ಕೇಂದ್ರ ಸರಕಾರದ ಆತ್ಮ ನಿರ್ಭರ್ ಭಾರತ್ ಯೋಜನೆ ಯಡಿ ರಾಷ್ಟ್ರೀಯ ಆಹಾರ ಭದ್ರತಾ ಹಾಗೂ ರಾಜ್ಯದ ಸಾರ್ವಜನಿಕ ವಿತರಣಾ ಪದ್ದತಿಯಡಿ ಪಡಿತರ ಚೀಟಿಯನ್ನು ಹೊಂದಿರುವ ವಲಸಿಗರು, ಹೋಟೆಲ್, ಕಾರ್ಖಾನೆ, ಕಟ್ಟಡ ಕಾರ್ಮಿಕರು ಹಾಗೂ ಇನ್ನಿತರ ಯಾವುದೇ ಸಂಸ್ದೆ ಕಚೇರಿ ಗಳಲ್ಲಿ ಕೆಲಸ ಮಾಡುತ್ತಿರುವ ವಲಸೆ ಕಾರ್ಮಿಕರು ಈ ಯೋಜನೆ ಅಡಿಯಲ್ಲಿ ಜೂನ್ ತಿಂಗಳ ಉಚಿತ ಆಹಾರಧಾನ್ಯವನ್ನು ಹತ್ತಿರದ ನ್ಯಾಯಬೆಲೆ ಅಂಗಡಿ ಯಲ್ಲಿ ಕೆಲವು ಶತ್ತುಗಳೊಂದಿಗೆ ಪಡೆಯಬಹುದಾಗಿದೆ.

ಕೇಂದ್ರ ಸರಕಾರದ ಆದೇಶದಂತೆ ಈ ಯೋಜನೆಯಡಿ ಬರುವ ವಲಸಿಗರು ಮತ್ತು ವಲಸೆ ಕಾರ್ಮಿಕರು ರಾಜ್ಯದಲ್ಲಿ ಮತ್ತು ಬೇರಾವುದೇ ರಾಜ್ಯದಲ್ಲಿ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಪಡಿತರ ಚೀಟಿ ಹೊಂದಿರಬಾರದು.

ಆಹಾರಧಾನ್ಯ ವಿತರಿಸುವಾಗ ಇದನ್ನು ಇಲಾಖೆಯ ತಂತ್ರಾಂಶದಲ್ಲಿ ಪರಿಶೀಲಿಸಿ ಖಾತ್ರಿ ಪಡಿಸಿಕೊಂಡು ಸಂಬಂಧಿಸಿದ ಫಲಾನುಭವಿಯ ಆಧಾರ್ ಸಂಖ್ಯೆಗೆ ನೊಂದಾಯಿತವಾಗಿರುವ ಮೊಬೈಲ್ ಸಂಖ್ಯೆ ಸ್ವೀಕೃತವಾಗುವ ಓಟಿಪಿ ಮೂಲಕ ಅಥವಾ ಆಧಾರ್ ಬಯೋ ದೃಡೀಕರಣ ಮೂಲಕ ಉಚಿತವಾಗಿ ಪಡಿತರ ವಿತರಿಸಲಾಗುವುದು.

ಸಂಬಂಧಿಸಿದ ಫಲಾನುಭವಿ ಆಹಾರಧಾನ್ಯ ಪಡೆಯಲು ನ್ಯಾಯಬೆಲೆ ಅಂಗಡಿಗೆ ಬರುವಾಗ ಕಡ್ಡಾಯವಾಗಿ ಆಧಾರ್ ಕಾರ್ಡುನ್ನು ತರಲೇಬೇಕು. ಜೂನ್ ತಿಂಗಳಲ್ಲಿ ಓರ್ವ ಸದಸ್ಯರಿಗೆ 5 ಕೆಜಿ ಅಕ್ಕಿ, ಪ್ರತಿ ಕುಟುಂಬಕ್ಕೆ 1 ಕೆಜಿ ಕಡಲೇಕಾಳನ್ನು ಜೂ.1ರಿಂದ 10ರವರೆಗೆ ವಿತರಿಸಲಾಗುವುದು. ಮೇ ತಿಂಗಳಿನಲ್ಲಿ ಆಹಾರಧಾನ್ಯವನ್ನು ಪಡೆಯದ ವಲಸೆ ಕಾರ್ಮಿಕ ಫಲಾನುಭವಿ ಜೂನ್ ತಿಂಗಳಲ್ಲಿ ಒಟ್ಟಿಗೆ 10 ಕೆಜಿ ಅಕ್ಕಿ ಮತ್ತು ಪ್ರತಿ ಕುಟುಂಬಕ್ಕೆ 2 ಕೆಜಿ ಕಡಲೇಕಾಳನ್ನು ಉಚಿತವಾಗಿ ಪಡೆಯಲು ಅರ್ಹರಿರುತ್ತಾರೆ.

ಆದಾಯ ತೆರಿಗೆ ಪಾವತಿಸುವವರು ಮತ್ತು ಸ್ವಂತ ಮನೆ ಹೊಂದಿರುವವರು ಈ ಯೋಜನೆಯಡಿಯಲ್ಲಿ ಆಹಾರಧಾನ್ಯವನ್ನು ಪಡೆಯಲು ಅನರ್ಹ ರಾಗಿರುವರು. ಒಂದು ವೇಳೆ ಇಂತಹವವರು ಆಹಾರಧಾನ್ಯ ಪಡೆದಿದ್ದು ಕಂಡು ಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 52ರಡಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News