ಓರ್ವ ಸಿಬ್ಬಂದಿಗೆ ಕೊರೋನ ಪಾಸಿಟಿವ್: ಮಲ್ಲೇಶ್ವರಂನ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸೀಲ್‍ಡೌನ್

Update: 2020-06-04 12:27 GMT

ಬೆಂಗಳೂರು, ಜೂ.4: ನಗರದ ಮಲ್ಲೇಶ್ವರಂನಲ್ಲಿರುವ ಪಂಜಾಬ್ ನ್ಯಾಷನಲ್ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಕೊರೋನ ಸೋಂಕು ದೃಢಪಟ್ಟ ಹಿನ್ನೆಲೆ ಬ್ಯಾಂಕ್‍ ಅನ್ನು ಸೀಲ್ ಡೌನ್ ಮಾಡಲಾಗಿದೆ.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಪಂಜಾಬ್ ಬ್ಯಾಂಕ್ ಸಿಬ್ಬಂದಿಯೊಬ್ಬರಿಗೆ ಕೊರೋನ ಟೆಸ್ಟ್ ಮಾಡಲಾಗಿತ್ತು. ಸಿಬ್ಬಂದಿಯ ರಿಪೋರ್ಟ್ ಪಾಸಿಟಿವ್ ಬಂದ ಹಿನ್ನೆಲೆ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಿಬ್ಬಂದಿಗೆ ಬ್ಯಾಂಕ್‍ಗೆ ದೌಡಾಯಿಸಿ ಬ್ಯಾಂಕ್‍ ಅನ್ನು ಸೀಲ್‍ಡೌನ್ ಮಾಡಿದ್ದಾರೆ.

ಕೊರೋನ ಸೋಂಕಿತ ವ್ಯಕ್ತಿಯ ಜೊತೆಗೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರಿಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಹುಡುಕಾಟ ಆರಂಭಿಸಿದ್ದಾರೆ. ಜೊತೆಗೆ ಬ್ಯಾಂಕ್‍ನ ಮುಂಭಾಗದಲ್ಲಿ ನೋಟಿಸ್ ಹಾಕಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News