ಕೋಟೆಕಾರ್: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ; ಇಬ್ಬರಿಗೆ ಗಂಭೀರ ಗಾಯ

Update: 2020-06-04 12:41 GMT

ಉಳ್ಳಾಲ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಕೋಟೆಕಾರು ಬಳಿ ಗುರುವಾರ ನಡೆದಿದೆ.

ಗಾಯಗೊಂಡವರನ್ನು ಕನೀರು ತೋಟ ನಿವಾಸಿ ಸೃಜನ್ (19) ಮತ್ತು ಪ್ರಿಯಾ (21) ಎಂದು ಗುರುತಿಸಲಾಗಿದೆ.

ಕೋಟೆಕಾರು ಕಡೆಗೆ ಹೋಗಲೆಂದು ಬೈಕ್ ನಲ್ಲಿ ಸಂಚರಿಸುತ್ತಿದ್ದ ಸಂದರ್ಭ ಕೋಟೆಕಾರಿನಲ್ಲಿ ನಿಂತಿದ್ದ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರು ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮಂಗಳೂರು ಗ್ರಾಮಾಂತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News