ಇನ್ನು ಮುಂದೆ 'ದಲಿತ' ಪದ ಬಳಸುವಂತಿಲ್ಲ: ಸಮಾಜ ಕಲ್ಯಾಣ ಇಲಾಖೆ ಆದೇಶ

Update: 2020-06-04 13:58 GMT

ಬೆಂಗಳೂರು, ಜೂ. 4: ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ನಿರ್ದೇಶನದಂತೆ ರಾಜ್ಯದ ಆಡಳಿತ ಭಾಷೆ, ಪತ್ರ ವ್ಯವಹಾರ, ಪ್ರಮಾಣ ಪತ್ರಗಳಲ್ಲಿ 'ದಲಿತ' ಎನ್ನುವ ಪದವನ್ನು ಬಳಸದಂತೆ ಸಮಾಜ ಕಲ್ಯಾಣ ಇಲಾಖೆ ಗುರುವಾರ ಅಧಿಕೃತ ಆದೇಶ ಹೊರಡಿಸಿದೆ.

ಸರಕಾರದ ಆಡಳಿತ ಭಾಷೆಯಲ್ಲಿ, ಅಧಿಕೃತ ಪತ್ರ ವ್ಯವಹಾರ ಸೇರಿದಂತೆ ಇನ್ನಿತರ ವ್ಯವಹಾರಗಳಲ್ಲಿ 'ಹರಿಜನ ಮತ್ತು ಗಿರಿಜನ' ಎನ್ನುವ ಪದವನ್ನು ಬಳಕೆ ಮಾಡುವಂತಿಲ್ಲ. ಆಂಗ್ಲಭಾಷೆಯಲ್ಲಿ ಎಸ್ಸಿ-ಎಸ್ಟಿ ಎಂದು ನಮೂದಿಸಬಹುದಾಗಿದ್ದು, ಇತರೆ ಭಾಷೆಗಳಲ್ಲಿ ಸೂಕ್ತ ಭಾಷಾಂತರಗೊಳಿಸಿದ ಪದಗಳನ್ನು ಬಳಸಬೇಕು. ರಾಜ್ಯದಲ್ಲಿ ಅಧಿಕೃತವಾಗಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ಎಸ್ಸಿ-ಎಸ್ಟಿ) ಎಂದು ನಮೂದಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಗೃಹ ಸಚಿವಾಲಯ ಹಾಗೂ ಕೇಂದ್ರ ಸಾಮಾಜಿಕ ನ್ಯಾಯ ಸಬಲೀಕರಣ ಸಚಿವಾಲಯದ ಸೂಚನೆ ಹಿನ್ನೆಲೆಯಲ್ಲಿ ರಾಜ್ಯದ ಆಡಳಿತ ಭಾಷೆಯಲ್ಲಿ, ಪತ್ರ ವ್ಯವಹಾರದಲ್ಲಿ ಹಾಗೂ ಪ್ರಮಾಣ ಪತ್ರದಲ್ಲಿ 'ದಲಿತ' ಎನ್ನುವ ಪದದ ಬದಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ(ಎಸ್ಸಿ-ಎಸ್ಟಿ) ಎಂದು ಬಳಕೆ ಮಾಡಬೇಕು'

-ಗೋವಿಂದ ಕಾರಜೋಳ, ಉಪಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News