ಹೆಚ್ಚುತ್ತಿರುವ ಕೊರೋನ ಸೋಂಕು: ಮಹಾರಾಷ್ಟ್ರದಿಂದ ಬರುವವರ ಕ್ವಾರಂಟೈನ್ ಅವಧಿ ವಿಸ್ತರಿಸಿದ ರಾಜ್ಯ ಸರಕಾರ

Update: 2020-06-04 14:56 GMT

ಬೆಂಗಳೂರು, ಜೂ.4: ರಾಜ್ಯದಲ್ಲಿ ದಿನೇ ದಿನೇ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಅವಧಿಯನ್ನು ವಿಸ್ತರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಮಹಾರಾಷ್ಟ್ರದಿಂದ ಬಂದವರಿಂದ ಅತೀ ಹೆಚ್ಚಿನ ಪ್ರಮಾಣದ ಸೋಂಕು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಆ ರಾಜ್ಯದಿಂದ ಬಂದಿರುವವರ ಕ್ವಾರಂಟೈನ್ ಅವಧಿಯನ್ನು 14 ದಿನದಿಂದ 21 ದಿನಗಳ ಕಾಲ ಏರಿಕೆ ಮಾಡಲಾಗಿದೆ.

ಮಹಾರಾಷ್ಷ್ರದಿಂದ ಬಂದವರಿಗೆ 7 ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಮತ್ತು 7 ದಿನಗಳ ಹೋಂ ಕ್ವಾರಂಟೈನ್ ಇದ್ದು ಇದೀಗ ಹೋಂ ಕ್ವಾರಂಟೈನ್ ಅವಧಿಯನ್ನು ಇನ್ನೂ 7 ದಿನಗಳ ಕಾಲ ಹೆಚ್ಚಳ ಮಾಡಲಾಗಿದೆ. ಹೀಗಾಗಿ 14 ದಿನಗಳ ಕಾಲ ಹೋಂ ಕ್ವಾರಂಟೈನ್‍ನಲ್ಲಿರುವುದು ಕಡ್ಡಾಯವಾಗಿದೆ.

ರಾಜ್ಯದಲ್ಲಿ ಕಂಡು ಬರುತ್ತಿರುವ ಪ್ರಕರಣಗಳ ಪೈಕಿ ಬಹುತೇಕ ಪ್ರಕರಣಗಳು ಮಹಾರಾಷ್ಟ್ರ ಲಿಂಕ್ ಹೊಂದಿರುವ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆ ಕ್ವಾರಂಟೈನ್ ಅವಧಿಯನ್ನು ಹೆಚ್ಚಿಗೆ ಮಾಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News