ಬೆಂಗಳೂರಿನಲ್ಲಿ 50ಕ್ಕೂ ಹೆಚ್ಚು ಮರಗಳ ಮಾರಣಹೋಮ: ಪರಿಸರ ಪ್ರೇಮಿಗಳು, ಗ್ರಾಮಸ್ಥರಿಂದ ಪ್ರತಿಭಟನೆ

Update: 2020-06-04 16:37 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.4: ಯಾವುದೇ ಅನುಮತಿ ಪಡೆಯದೆ 50ಕ್ಕೂ ಹೆಚ್ಚು ಮರಗಳ ಮಾರಣಹೋಮ ನಡೆಸಿರುವ ಘಟನೆ ಯಲಹಂಕ ತಾಲೂಕಿನ ಚಿಕ್ಕಜಾಲ ಹೋಬಳಿಯ ಬಿಲ್ಲಮಾರನಹಳ್ಳಿಯಲ್ಲಿ ನಡೆದಿದ್ದು, ಇದನ್ನು ವಿರೋಧಿಸಿದ ಪರಿಸರ ಪ್ರೇಮಿಗಳು ಹಾಗೂ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ಗುರುವಾರ ಅರಣ್ಯಾಧಿಕಾರಿಗಳು ಹಾಗೂ ಗ್ರಾಮ ಪಂಚಾಯತ್ ಸೇರಿದಂತೆ ಯಾವುದೇ ಅಧಿಕಾರಿಗಳಿಂದ ಅನುಮತಿ ಪಡೆಯದೆ ಮರಗಳನ್ನು ಕಡಿದಿರುವುದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯಾಧಿಕಾರಿಗಳು, ಟ್ರ್ಯಾಕ್ಟರ್ ಸಮೇತ ಹೊಂಗೆ ತುಂಡುಗಳನ್ನು ಜಪ್ತಿ ಮಾಡಿದ್ದಾರೆ.

ಸ್ಥಳೀಯ ಪ್ರಸಿದ್ಧಿ ಲೇಔಟ್‍ನ ಅಧ್ಯಕ್ಷ ಜಾರ್ಜ್ ಎಂಬುವವರು ಈ ಕೃತ್ಯವನ್ನು ಎಸಗಿದ್ದು, ಪ್ರಶ್ನಿಸಲು ಹೋದರೆ ಯಾರಿಗೆ ಬೇಕಾದರೂ ದೂರು ನೀಡಿ ಎಂದು ಸವಾಲು ಹಾಕಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ರೀತಿ ಮರಗಳ ಮಾರಣಹೋಮ ನಡೆಸುವವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಬಿಲ್ಲಮಾರನಹಳ್ಳಿ ಗ್ರಾಮಸ್ಥರು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News