ಆರ್ ಟಿಇನಲ್ಲಿ ಅರ್ಜಿ ಸಲ್ಲಿಸಲು ಕಾಲಾವಕಾಶ

Update: 2020-06-04 18:35 GMT

ಬೆಂಗಳೂರು, ಜೂ.4: ಆರ್ ಟಿಇ ಅಡಿಯಲ್ಲಿ 2020-21ನೇ ಸಾಲಿನ ರಾಜ್ಯದ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಅರ್ಹ ಮಕ್ಕಳ ದಾಖಲಾತಿ ಪ್ರಕ್ರಿಯೆಗೆ ನೆರೆಹೊರೆ ಶಾಲೆಗಳು, ಶೇ.25 ಸೀಟುಗಳ ಅಂತಿಮ ಪಟ್ಟಿ ಹಾಗೂ ದಾಖಲಾತಿ ಪ್ರಕ್ರಿಯೆಗೆ ವೇಳಾಪಟ್ಟಿಯನ್ನು ಇಲಾಖಾ ವೆಬ್‍ಸೈಟ್ http://www.schooleducation.kar.nic.in ನಲ್ಲಿ ಪ್ರಕಟಿಸಲಾಗಿದ್ದು, ಆಸಕ್ತ ಪೋಷಕರು ಅರ್ಜಿ ಸಲ್ಲಿಸಬಹುದಾಗಿದೆ.

ಅನುದಾನಿತ ಶಾಲೆಗಳು ಸೇರಿದಂತೆ ದಾಖಲಾತಿ ಕೋರಿ ಪೋಷಕರು ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಜೂ.10ರಿಂದ 24ರವರೆಗೆ ಅವಕಾಶ ಕಲ್ಪಿಸಲಾಗಿದೆ. ಜು.3ರಂದು ಲಾಟರಿ ಪ್ರಕ್ರಿಯೆಗೆ ಅರ್ಹ ಅಭ್ಯರ್ಥಿಗಳ ಅಂತಿಮ ಪಟ್ಟಿ ಪ್ರಕಟಿಸಲಾಗುತ್ತದೆ. ಜು.13ರಂದು ಆನ್‍ಲೈನ್ ತಂತ್ರಾಂಶದ ಮೂಲಕ ಮೊದಲ ಸುತ್ತಿನ ಸೀಟು ಹಂಚಿಕೆಯಾಗಲಿದೆ.

ಜು.14ರಿಂದ 21ರವರೆಗೆ ಶಾಲೆಗಳಲ್ಲಿ ದಾಖಲಾತಿ ಪ್ರಾರಂಭವಾಗಲಿದೆ. ಹಾಗೂ ಶಾಲೆಗಳಲ್ಲಿ ದಾಖಲಾದ ಮೊದಲ ಸುತ್ತಿನ ಮಕ್ಕಳ ವಿವರಗಳನ್ನು ತಂತ್ರಾಂಶದಲ್ಲಿ ಅಪ್‍ಲೋಡ್ ಮಾಡಲಾಗುತ್ತದೆ. ಜು.28ರಂದು ಆನ್‍ಲೈನ್ ತಂತ್ರಾಂಶದ ಮೂಲಕ ಎರಡನೇ ಸುತ್ತಿನ ಸೀಟು ಹಂಚಕೆ ಆಗಲಿದೆ. ಜು.29ರಿಂದ ಶಾಲೆಗಳ ದಾಖಲಾತಿ ಅವಧಿ ಪ್ರಾರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಕಟನೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News