ಹೊರರಾಜ್ಯಗಳಿಂದ ಆಗಮಿಸುವವರ ಕ್ವಾರಂಟೈನ್‌ಗೆ ಹೊಸ ಶರತ್ತು

Update: 2020-06-05 05:41 GMT

ಬೆಂಗಳೂರು, ಜೂ.5: ಕೋವಿಡ್-19 ಸಾಂಕ್ರಾಮಿಕವನ್ನು ತಡೆಗಟ್ಟುವ ಉದ್ದೇಶದಿಂದ ಹೊರರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರಿಗೆ ವಿಧಿಸಲಾಗುವ ಕ್ವಾರಂಟೈನ್ ಅವಧಿಯನ್ನು ಬದಲಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದೆ.

ತಿದ್ದುಪಡಿ ಆದೇಶದಂತೆ ಹೊರರಾಜ್ಯಗಳಿಂದ ಆಗಮಿಸುವವರು ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಬಳಿಕ 14 ದಿನಗಳ ಕಾಲ ಹೋಂ ಕ್ವಾರಂಟೈನ್‌ಗೆ ಒಳಗಾಗುವುದು ಕಡ್ಡಾಯವಾಗಿದೆ. ಈ ಮೊದಲು ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಬಳಿಕ ಏಳು ದಿನಗಳ ಹೋಂ ಕ್ವಾರಂಟೈನ್ ಸೂಚಿಸಲಾಗುತ್ತಿತ್ತು. ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ಅವಧಿಯಲ್ಲಿ ಬದಲಾವಣೆ ಮಾಡಲಾಗಿದೆ.

ಅದೇರೀತಿ ಕ್ವಾರಂಟೈನ್ ಮುದ್ರೆಯನ್ನು ಹೊಂದಿರುವವರಿಗೆ ಅಂಗಡಿ, ವಾಣಿಜ್ಯ ಸಂಸ್ಥೆಗಳು, ಕಚೇರಿ, ಕಾರ್ಖಾನೆಗಳು, ಮಾಲ್‌ಗಳು, ಧಾರ್ಮಿಕ ಸ್ಥಳಗಳು, ಹೊಟೇಲ್ ಇತ್ಯಾದಿ ಸಾರ್ವಜನಿಕ ಸ್ಥಳಗಳಿಗೆ ಪ್ರವೇಶವನ್ನು ನಿಷೇಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News