ಮಾರ್ನಬೈಲು: ಉರುಳಿಬಿದ್ದ ಮರದ ದಿಮ್ಮಿ ಸಾಗಾಟದ ಲಾರಿ; ವಿದ್ಯುತ್ ಕಂಬಗಳಿಗೆ ಹಾನಿ

Update: 2020-06-05 06:26 GMT

ಬಂಟ್ವಾಳ, ಜೂ.5: ಮರದ ದಿಮ್ಮಿಗಳನ್ನು ಹೇರಿಕೊಂಡು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಗಳಿಗೆ ಢಿಕ್ಕಿಯಾಗಿ ರಸ್ತೆ ಬದಿಗೆ ಉರುಳಿ ಬಿದ್ದ ಘಟನೆ ತಾಲೂಕಿನ ಮೆಲ್ಕಾರ್ ಸಮೀಪದ ಮಾರ್ನಬೈಲು ಜಂಕ್ಸ್ ನ್ ನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದೆ.

ಘಟನೆಯಿಂದ ಲಾರಿ ಜಖಂಗೊಂಡಿದೆ. ಮೂರಕ್ಕೂ ಅಧಿಕ ವಿದ್ಯುತ್ ಕಂಬಗಳು ಉರುಳಿಬಿದ್ದಿವೆ. ವಿದ್ಯುತ್ ತಂತಿಗಳು ತುಂಡಾಗಿ ನಷ್ಟ ಸಂಭವಿಸಿದೆ. ಈ ಭಾಗದಲ್ಲಿ ವಿದ್ಯುತ್ ಸಂಪ್ರಕ ಕಡಿತಗೊಂಡಿದೆ. ಮೆಸ್ಕಾಂ ಇಲಾಖೆಯವರು ವಿದ್ಯುತ್ ಕಂಬಗಳ ದುರಸ್ತಿ ಕೆಲಸ ನಡೆಸುತ್ತಿದ್ದಾರೆ. ಲಾರಿ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಠಾಣಾ ಎಸ್ಸೈ ರಾಜೇಶ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News