ಮಾಲಿನ್ಯ ನಿಯಂತ್ರಣ ಮಂಡಳಿ ಡಿಜಿಟಲ್ ಅಭಿಯಾನಕ್ಕೆ ಸಿಎಂ ಮೆಚ್ಚುಗೆ

Update: 2020-06-05 07:55 GMT

ಬೆಂಗಳೂರು, ಜೂ.5: ವಿಶ್ವ ಪರಿಸರ ದಿನಾಚರಣೆ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಮ್ಮಿಕೊಂಡಿರುವ ಡಿಜಿಟಲ್ ಅಭಿಯಾನ 25 ಲಕ್ಷಕ್ಕೂ ಹೆಚ್ಚು ಜನರನ್ನು ತಲುಪಿರುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.

ಈ ಬಾರಿ ಪರಿಸರ ದಿನಾಚರಣೆಯ ವಿಷಯ “ಜೀವ ವೈವಿಧ್ಯ”. ಜೀವ ವೈವಿಧ್ಯ ಇದ್ದಾಗ ಮಾತ್ರ ಪರಿಸರ ಸಮತೋಲನ ಕಾಪಾಡಲು ಸಾಧ್ಯ ಎಂದ ಮುಖ್ಯಮಂತ್ರಿ, ಇತ್ತೀಚೆಗೆ ಕೋವಿಡ್-19ರ ನಿಯಂತ್ರಣಕ್ಕಾಗಿ ಲಾಕ್ ಡೌನ್ ಘೋಷಣೆಯಿಂದಾಗಿ ಪರಿಸರ ಮಾಲಿನ್ಯ ಗಣನೀಯವಾಗಿ ಕಡಿಮೆಯಾಗಿರುವುದು ಸಮಾಧಾನಕರ ವಿಷಯ ಎಂದರು.

ಸಮಾರಂಭದಲ್ಲಿ ಪರಿಸರ ಗೀತೆ, ಯೂಟ್ಯೂಬ್ ಚಾನಲ್ ಹಾಗೂ ಮಾಲಿನ್ಯ ನಿಯಂತ್ರಣ ಮಂಡಳಿಯ ಬಳಕೆದಾರ ಸ್ನೇಹಿ ವೆಬ್ ಸೈಟಿಗೆ ಚಾಲನೆ ನೀಡಲಾಯಿತು.

ಅರಣ್ಯ ಸಚಿವ ಆನಂದ್ ಸಿಂಗ್, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸಂದೀಪ್ ದವೆ, ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷ ವಿಜಯ್ ಕುಮಾರ್ ಗೋಗಿ, ಸದಸ್ಯ ಕಾರ್ಯದರ್ಶಿ ಶ್ರೀನಿವಾಸುಲು ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News