​ಕೋವಿಡ್-19 ಚಿಕಿತ್ಸೆ ಆಯುಷ್ಮಾನ್ ಯೋಜನೆಯಡಿ ಸೇರ್ಪಡೆಗೆ ಶಾಸಕ ರಘುಪತಿ ಭಟ್ ಮನವಿ

Update: 2020-06-05 11:48 GMT

ಉಡುಪಿ, ಜೂ.5: ಕೋವಿಡ್-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತಿದ್ದು, ಮುಂದಿನ ದಿನಗಳಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಇದರ ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಿ ಚಿಕಿತ್ಸೆಯ ವೆಚ್ಚವನ್ನು ಆಯುಷ್ಮಾನ್ ಯೋಜನೆಯಡಿ ಭರಿಸಲು ಯೋಜನೆಯನ್ನು ರೂಪಿಸುವಂತೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಮನವಿ ಮಾಡಿದ್ದಾರೆ.

ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುದಾಕರ್ ಅವರು ಬುಧವಾರ ಉಡುಪಿಗೆ ಆಗಮಿಸಿ, ಕೋವಿಡ್-19ರ ಸಂಬಂಧ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಡಳಿತದ ಜೊತೆ ಮಣಿಪಾಲದಲ್ಲಿರುವ ಜಿಪಂ ಸಭಾಂಗಣದಲ್ಲಿ ನಡೆಸಿದ ಪ್ರಗತಿ ಪರಿಶೀಲನಾ ಸಭೆಯನ್ನು ಅವರು ಈ ಮನವಿ ಮಾಡಿದರು.

ಈಗಾಗಲೇ ಮಣಿಪಾಲ ಸಂಸ್ಥೆಯವರು ಉಡುಪಿಯ ಡಾ.ಟಿಎಂಎ ಪೈ ಆಸ್ಪತ್ರೆಯನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಉಚಿತವಾಗಿ ನೀಡಿದ್ದಾರೆ. ಪ್ರಸ್ತುತ ಉಡುಪಿಯಲ್ಲಿ ಸೋಂಕಿತರ ಸಂಖ್ಯೆ ಅಧಿಕಗೊಂಡಿದ್ದು, ಮುಂದಿನ ದಿನಗಳಲ್ಲಿ ಪ್ರತಿಯೊಬ್ಬರಿಗೂ ಉಚಿತ ಚಿಕಿತ್ಸೆ ನೀಡುವುದು ಆಸ್ಪತ್ರೆಗಳಿಗೆ ಹೊರೆ ಯಾಗುತ್ತದೆ ಎಂದವರು ಹೇಳಿದ್ದಾರೆ.

ಅಲ್ಲದೇ ಸೋಂಕಿತರ ಸಂಖ್ಯೆ ಹೆಚ್ಚಳವಾಗುತಿದ್ದು, ಇದರಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆಯೂ ಅಧಿಕ ಪ್ರಮಾಣದಲ್ಲಿ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಿ ಚಿಕಿತ್ಸೆಯ ವೆಚ್ಚವನ್ನು ಆಯುಷ್ಮಾನ್ ಯೋಜನೆಯಡಿ ಭರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರನ್ನು ಒತ್ತಾಯಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News