ರಾಜ್ಯದ ಈ ರೈಲ್ವೆ ನಿಲ್ದಾಣದಲ್ಲಿ ನಿರ್ಮಾಣವಾಗಲಿದೆ ವಿಶ್ವದ ಅತೀ ಉದ್ದದ ಪ್ಲಾಟ್‌ ಫಾರ್ಮ್

Update: 2020-06-05 12:35 GMT
ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ, ಜೂ.5: ಹುಬ್ಬಳ್ಳಿಯಲ್ಲಿರುವ ರೈಲ್ವೆ ನಿಲ್ದಾಣವು ವಿಶ್ವದಲ್ಲೇ ಅತೀ ಉದ್ದದ ಪ್ಲಾಟ್‌ ಫಾರ್ಮ್ ಹೊಂದಿದ ಹಿರಿಮೆಗೆ ಪಾತ್ರವಾಗಲಿದ್ದು, 2021ರ ಜೂನ್‌ ವೇಳೆಗೆ ವಿಶ್ವದ ಅತೀ ಉದ್ದದ ಪ್ಲಾಟ್‌ ಫಾರ್ಮ್ ಹುಬ್ಬಳ್ಳಿಯಲ್ಲಿ ನಿರ್ಮಾಣವಾಗಲಿದೆ ಎಂದು ತಿಳಿದು ಬಂದಿದೆ.

ನೈಋುತ್ಯ ರೈಲ್ವೆ ವಲಯ ಕೇಂದ್ರ ಕಚೇರಿ ಹೊಂದಿರುವ ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ ಸದ್ಯ 550 ಮೀಟರ್ ಉದ್ದದ ಪ್ಲಾಟ್‌ ಫಾರ್ಮ್ ಇದೆ. ಈ ಪ್ಲಾಟ್‌ ಫಾರ್ಮ್ ಅನ್ನು 1,440 ಮೀಟರ್‌ಗೆ ವಿಸ್ತರಿಸಲಾಗುತ್ತಿದೆ. ಈ ಮೂಲಕ ಜಗತ್ತಿನಲ್ಲೇ ಅತೀ ಉದ್ದದ ರೈಲ್ವೆ ಪ್ಲಾಟ್ ‌ಫಾರ್ಮ್ ಇರುವ ನಿಲ್ದಾಣವಾಗಿ ಬದಲಾಗಲಿದೆ.

ಈಗಿನ ತಪಾಸಣಾ ಕ್ಯಾರೇಜ್‌ ಮಾರ್ಗವನ್ನು ಪೂರ್ಣ ಪ್ಲಾಟ್‌ ಫಾರ್ಮ್ ಆಗಿ ಪರಿವರ್ತಿಸಲು ಉದ್ದೇಶಿಸಲಾಗಿದೆ. ಈಗಾಗಲೇ ಕೆಲಸ ಆರಂಭವಾಗಿದ್ದು, ಸುಮಾರು 90 ಕೋಟಿ ರೂ. ವೆಚ್ಚದಲ್ಲಿ ಈ ಪ್ಲಾಟ್‌ ಫಾರ್ಮ್ ಕಾಮಗಾರಿ ನಡೆಸಲಾಗುತ್ತದೆ ಎಂದು ತಿಳಿದುಬಂದಿದೆ.

ಈಶಾನ್ಯ ರೈಲ್ವೆಯ ಪ್ರಧಾನ ಕಚೇರಿ ಹೊಂದಿರುವ ಉತ್ತರ ಪ್ರದೇಶದ ಗೋರಕ್ ಪುರದಲ್ಲಿ 1,366 ಮೀಟರ್‌ ಉದ್ದದ ಪ್ಲಾಟ್‌ ಫಾರ್ಮ್ ಇದ್ದು, ಇದು ಸದ್ಯಕ್ಕೆ ವಿಶ್ವದ ಅತಿ ಉದ್ದದ ಪ್ಲಾಟ್‌ ಫಾರ್ಮ್ ಎನ್ನುವ ಹೆಗ್ಗಳಿಕೆ ಹೊಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News