ರವಿ ಪೂಜಾರಿ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ ಸಿಸಿಬಿ

Update: 2020-06-05 13:28 GMT

ಬೆಂಗಳೂರು, ಜೂ.5: ಭೂಗತ ಪಾತಕಿ ರವಿ ಪೂಜಾರಿ ವಿರುದ್ಧದ ಎರಡು ಪ್ರಕರಣಗಳಲ್ಲಿ ನಗರದ ಸಿಸಿಬಿ ಪೊಲೀಸರು ನಗರದ 1ನೆ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ.

ಎರಡು ದಶಕಗಳ ಕಾಲ ತಲೆಮರೆಸಿಕೊಂಡು ಕಳೆದ ವರ್ಷವಷ್ಟೇ ಸೆನೆಗಲ್‍ನಲ್ಲಿ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದ ರವಿ ಪೂಜಾರಿಯನ್ನು ನಗರಕ್ಕೆ ಕರೆತಂದಿದ್ದ ಪೊಲೀಸರು, ಆತನ ವಿರುದ್ಧದ ಪ್ರಕರಣಗಳ ತನಿಖೆ ನಡೆಸುತ್ತಿದ್ದಾರೆ.

ತಿಲಕನಗರ ಠಾಣೆ ವ್ಯಾಪ್ತಿಯಲ್ಲಿದ್ದ ಶಬನಂ ಡೆವಲಪರ್ಸ್ ಕಚೇರಿಯಲ್ಲಿ ನಡೆದಿದ್ದ ಜೋಡಿ ಕೊಲೆ ಹಾಗೂ ವೈಟ್‍ಪೀಲ್ಡ್ ಠಾಣೆ ವ್ಯಾಪ್ತಿಯಲ್ಲಿ ಬೆದರಿಕೆ ಹಾಕಿ ಕಿರುಕುಳ ನೀಡಿದ್ದ ಪ್ರಕರಣ ರವಿ ಪೂಜಾರಿ ಮೇಲಿತ್ತು. ಈ ಎರಡು ಪ್ರಕರಣದಲ್ಲಿ ಆತನ ವಿರುದ್ಧ ಇದೀಗ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.

ಎರಡು ಪ್ರಕರಣಗಳಲ್ಲಿ ಮಾತ್ರ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. ಉಳಿದ ಪ್ರಕರಣಗಳ ತನಿಖೆ ಮುಂದುವರಿದಿದೆ ಎಂದು ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News