ರಾಜ್ಯಕ್ಕೆ ಮುಂಗಾರು ಪ್ರವೇಶ: ವಾಡಿಕೆಗಿಂತ ಹೆಚ್ಚು ಮಳೆ ಸಾಧ್ಯತೆ

Update: 2020-06-05 15:59 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.5: ವಾಡಿಕೆಯಂತೆ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಈ ವರ್ಷ ಮುಂಗಾರು ಅವಧಿಯಲ್ಲಿ ದಕ್ಷಿಣ ಭಾರತ ರಾಜ್ಯಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ. ಜುಲೈನಲ್ಲಿ ಶೇ.104, ಆಗಸ್ಟ್ ನಲ್ಲಿ ಶೇ.97 ವಾಡಿಕೆ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 1ಕ್ಕೆ ಮುಂಗಾರು ಕೇರಳವನ್ನು ಪ್ರವೇಶಿಸಿದ್ದು, ರಾಜ್ಯದ ವಿವಿಧೆಡೆ ಮಳೆಯಾಗಿದೆ. ಈ ಬಾರಿ ಶೇ.80 ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಂದಾಜಿಸಿದೆ.

ನಿಸರ್ಗ ಚಂಡಮಾರುತ ತೀವ್ರತೆ ಕಡಿಮೆಯಾಗಿದ್ದು, ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಿದೆ. ಕರಾವಳಿಯ 3 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಎಚ್ಚರಿಕೆಯನ್ನು ಇಲಾಖೆ ನೀಡಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News