ಬೆಂಗಳೂರು: ಕಂಟೈನ್ಮೆಂಟ್ ಝೋನ್‍ಗಳಲ್ಲಿರುವ ಪರೀಕ್ಷಾ ಕೇಂದ್ರಗಳ ಸ್ಥಳಾಂತರ

Update: 2020-06-05 16:05 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.5: ನಗರದ ಕಂಟೈನ್ಮೆಂಟ್ ಝೋನ್‍ಗಳಲ್ಲಿರುವ ಎಸೆಸೆಲ್ಸಿ ಮತ್ತು ಪಿಯುಸಿ ಪರೀಕ್ಷಾ ಕೇಂದ್ರಗಳನ್ನು ಸ್ಥಳಾಂತರಿಸಲಾಗಿದೆ.

ಜೂ. 25 ರಿಂದ ಎಸೆಸೆಲ್ಸಿ ಪರೀಕ್ಷೆ ಹಾಗೂ ಜೂ.18ರಂದು ಪಿಯುಸಿ ಇಂಗ್ಲಿಷ್ ಪರೀಕ್ಷೆ ಆರಂಭಗೊಳ್ಳಲಿರುವುದರಿಂದ ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಕಂಟೈನ್ಮೆಂಟ್ ಝೋನ್‍ಗಳಲ್ಲಿರುವ ಪರೀಕ್ಷಾ ಕೇಂದ್ರಗಳನ್ನು ರದ್ದುಗೊಳಿಸಿ ಸಮೀಪದ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಬಿಬಿಎಂಪಿ ಆಯುಕ್ತ ಅನಿಲ್‍ ಕುಮಾರ್ ಆದೇಶ ಹೊರಡಿಸಿದ್ದಾರೆ.

ನಗರದಲ್ಲಿ ಒಟ್ಟು 40 ಕಂಟೈನ್ಮೆಂಟ್ ಝೋನ್‍ಗಳಿದ್ದು, ಅಲ್ಲಿರುವ ಪರೀಕ್ಷಾ ಕೇಂದ್ರಗಳನ್ನು ಸ್ಥಳಾಂತರ ಮಾಡಿದ ಆದೇಶವನ್ನು ಪಿಯು ಹಾಗೂ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಗೆ ರವಾನಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News