ಎಂಟಿಬಿ ನಾಗರಾಜ್‍ಗೆ ಅನ್ಯಾಯವಾಗಿದೆ: ಸಚಿವ ಬಸವರಾಜ

Update: 2020-06-05 16:08 GMT

ಬೆಂಗಳೂರು, ಜೂ.5: ಕಳೆದ ವಿಧಾನಸಭಾ ಉಪ ಚುನಾವಣೆ ಸಂದರ್ಭದಲ್ಲಿ ಮಾಜಿ ಸಚಿವ ಎಂಟಿಬಿ ನಾಗರಾಜ್‍ಗೆ ಅನ್ಯಾಯವಾಗಿದೆ. ಆದುದರಿಂದ, ಅವರಿಗೆ ನ್ಯಾಯ ಒದಗಿಸಿಕೊಡಬೇಕೆಂದು ಈಗಾಗಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಮನವಿ ಮಾಡಿದ್ದೇವೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ ತಿಳಿಸಿದರು.

ಶುಕ್ರವಾರ ವಿಶ್ವ ಪರಿಸರ ದಿನದ ಅಂಗವಾಗಿ ಹೊರಮಾವು ವಾರ್ಡ್‍ನ ಅರ್ಕಾವತಿ ಬಡಾವಣೆಯಲ್ಲಿ ಗಿಡ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಾಗ ಎಂಟಿಬಿ ನಾಗರಾಜ್, ಎಚ್.ವಿಶ್ವನಾಥ್, ಆರ್.ಶಂಕರ್ ಹಾಗೂ ರೋಷನ್ ಬೇಗ್ ಅವರನ್ನು ಪರಿಗಣಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಬಸವರಾಜ ಹೇಳಿದರು.

ಪರಿಸರವನ್ನು ಹಾಳು ಮಾಡುವ ಕೆಲಸವನ್ನು ಯಾರೊಬ್ಬರೂ ಮಾಡಬಾರದು. ಪ್ರತಿಯೊಬ್ಬರೂ ಗಿಡಗಳನ್ನು ನೆಟ್ಟು ಪೋಷಿಸುವ ಕೆಲಸವನ್ನು ಮಾಡಬೇಕು. ಕಾಂಕ್ರಿಟ್ ಕಾಡು ಎಂದು ಕರೆಸಿಕೊಳ್ಳುತ್ತಿರುವ ಬೆಂಗಳೂರನ್ನು ಪುನಃ ಉದ್ಯಾನನಗರಿಯನ್ನಾಗಿಸಲು ಸಾರ್ವಜನಿಕರ ಸಹಕಾರ ಅಗತ್ಯ ಎಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಬಿಬಿಎಂಪಿ ಸದಸ್ಯರಾದ ಜಯಪ್ರಕಾಶ್, ಎಂ.ಎನ್.ಶ್ರೀಕಾಂತ್, ಬಿಜೆಪಿ ಮುಖಂಡರಾದ ಮುನೇಗೌಡ, ಕೇಶವ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News