ದಾವೂದ್ ಇಬ್ರಾಹೀಂ ಮತ್ತು ಪತ್ನಿಗೆ ಕೊರೋನ ಸೋಂಕು: ವರದಿ

Update: 2020-06-05 16:27 GMT

ಹೊಸದಿಲ್ಲಿ, ಜೂ.5: ಭೂಗತ ಪಾತಕಿ ದಾವೂದ್ ಇಬ್ರಾಹೀಂ ಮತ್ತು ಆತನ ಪತ್ನಿಗೆ ಕೊರೋನ ಸೋಂಕು ದೃಢಪಟ್ಟಿದೆ ಎಂದು ಸರಕಾರಿ ಮೂಲಗಳನ್ನು ಉಲ್ಲೇಖಿಸಿ ಪಾಕಿಸ್ತಾನದ ಮಾಧ್ಯಮಗಳು ವರದಿ ಮಾಡಿವೆ.

ದಾವೂದ್‌ನನ್ನು ಈಗ ಕರಾಚಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದ್ದರೆ ಪತ್ನಿ ಮೆಹಜಬೀನ್‌ಗೂ ಸೋಂಕು ದೃಢಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ದಾವೂದ್‌ನ ವೈಯಕ್ತಿಕ ಭದ್ರತಾ ಸಿಬಂದಿ ಹಾಗೂ ಸಹಚರರನ್ನೂ ಕ್ವಾರಂಟೈನ್‌ಗೆ ಒಳಪಡಿಸಲಾಗಿದೆ ಎಂದು ವರದಿಯಾಗಿದೆ.

ಮುಂಬೈಯಲ್ಲಿ ಜನಿಸಿದ್ದ ದಾವೂದ್ ಈಗ ಪಾಕಿಸ್ತಾನದ ಕರಾಚಿಯಲ್ಲಿ ನೆಲೆಸಿದ್ದಾನೆ ಎನ್ನಲಾಗಿದೆ. ಭಾರತದ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿರುವ ದಾವೂದ್ 1993ರ ಮುಂಬೈ ಬಾಂಬ್ ಸ್ಫೋಟ ಪ್ರಕರಣದ ಆರೋಪಿಯಾಗಿದ್ದು, ಈತನ ವಿರುದ್ಧ ಹಲವು ಇಂಟರ್‌ಪೋಲ್ ನೋಟಿಸ್ ಜಾರಿಗೊಳಿಸಲಾಗಿದೆ. 2003ರಲ್ಲಿ ಭಾರತ ಮತ್ತು ಅವೆುರಿಕ ಈತನನ್ನು ಜಾಗತಿಕ ಉಗ್ರ ಎಂದು ಘೋಷಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News