ಬಂಟ್ವಾಳ: ನೆಟ್ಲಮುಡ್ನೂರು ಗ್ರಾಮದ ಮಹಿಳೆಗೆ ಕೊರೋನ ಪಾಸಿಟಿವ್

Update: 2020-06-05 17:44 GMT

ಬಂಟ್ವಾಳ: ಇಲ್ಲಿನ ನೆಟ್ಲಮುಡ್ನೂರು ಗ್ರಾಮದ ವೃದ್ಧ ಮಹಿಳೆಯೊಬ್ಬರಿಗೆ ಕೋರೋನ ಫಾಸಿಟಿವ್ ಪತ್ತೆಯಾಗಿರುವುದು ತಾಲೂಕಿನಲ್ಲಿ ಮತ್ತೆ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಚಿಕಿತ್ಸೆಗೆಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆಂದು ಇವರು ದಾಖಲಾಗಿದ್ದರು. ಈತನ್ಮಧ್ಯೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗಂಟಲು ಪರೀಕ್ಷೆ ನಡೆಸಿದಾಗ ಫಾಸಿಟಿವ್ ವರದಿ ಬಂದಿರುವ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. 

ನೆಟ್ಲಮುಡ್ನೂರು ಗ್ರಾಮದ ಕುಕ್ಕರಬೆಟ್ಟುವಿನಲ್ಲಿರುವ ಇವರ ಮನೆಯಲ್ಲಿದ್ದ ಇತರ ಇಬ್ಬರನ್ನು ಹೋಂ ಕ್ವಾರಂಟೈನ್ ನಲ್ಲಿ ಇಡಲಾಗಿದ್ದು, ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News