ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿಲ್ಲ ಎಂದು ಹೈಕೋರ್ಟ್ ಮೆಟ್ಟಿಲೇರಿದ 80 ವರ್ಷದ ವ್ಯಕ್ತಿ ವಿಚಾರಣೆಗೂ ಮುನ್ನ ಮೃತ್ಯು

Update: 2020-06-05 18:03 GMT

ಹೊಸದಿಲ್ಲಿ: ಕೊರೋನ ಚಿಕಿತ್ಸೆಗಾಗಿ ಹಲವು ಆಸ್ಪತ್ರೆಗಳಿಗೆ ತೆರಳಿದರೂ ತನ್ನನ್ನು ದಾಖಲಿಸಿಲ್ಲ ಎಂದು ಆರೋಪಿಸಿ ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದ 80 ವರ್ಷದ ವ್ಯಕ್ತಿಯೊಬ್ಬರು ಅವರ ಪ್ರಕರಣದ ವಿಚಾರಣೆ ಆರಂಭಗೊಳ್ಳುವುದಕ್ಕೆ ಮೊದಲೇ ಕೊನೆಯುಸಿರೆಳೆದಿದ್ದಾರೆ.

ತಾನು ಮೇ 25ರಂದು ಅನಾರೋಗ್ಯಪೀಡಿತನಾಗಿದ್ದು, ದಿಲ್ಲಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಯಿತು. ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ ತಾನು ಅಲ್ಲಿ ಕೊರೋನ ಸೋಂಕಿಗೆ ಒಳಗಾದೆ ಎಂದು ಅವರು ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಅವರನ್ನು ವೆಂಟಿಲೇಟರ್ ನಲ್ಲಿ ಇರಿಸಿದ ನಂತರ , ಆಸ್ಪತ್ರೆಯ ಸಿಬ್ಬಂದಿ ಬೇರೆಡೆಗೆ ಸ್ಥಳಾಂತರಿಸುವಂತೆ ಬಲವಂತಪಡಿಸಿದರು. ಹೆಚ್ಚಿನ ಶುಲ್ಕ ವಿಧಿಸಿ ಇದು ಕೊರೋನಗೆ ಚಿಕಿತ್ಸೆ ನೀಡುವ ಆಸ್ಪತ್ರೆಯಲ್ಲ ಎಂದರು ಎಂದು ಮೃತ ವ್ಯಕ್ತಿಯ ಪುತ್ರ ಆರೋಪಿಸಿದ್ದಾರೆ.

ಆದರೆ ಹಲವು ಆಸ್ಪತ್ರೆಗಳಿಗೆ ಅಲೆದಾಡಿದರೂ ಯಾರೂ ದಾಖಲಿಸಿಕೊಳ್ಳಲಿಲ್ಲ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕುಟುಂಬ ದಿಲ್ಲಿ ಹೈಕೋರ್ಟ್ ಮೆಟ್ಟಿಲೇರಿದರು. ಆದರೆ ಈ ಪ್ರಕರಣದ ವಿಚಾರಣೆ ನಡೆಯುವ ದಿನವೇ ಆ ವ್ಯಕ್ತಿ ಕೊನೆಯುಸಿರೆಳೆದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News