ಡಾ. ಯು.ಬಿ ರಾಜಲಕ್ಷ್ಮಿಗೆ ಖಾದ್ರಿ ಶಾಮಣ್ಣ ಪ್ರಶಸ್ತಿ

Update: 2020-06-05 18:10 GMT

ಬೆಂಗಳೂರು, ಜೂ.5: ಪ್ರಸಕ್ತ ಸಾಲಿನ ಖಾದ್ರಿ ಶಾಮಣ್ಣ ಪ್ರಶಸ್ತಿಯ ಪುರಸ್ಕೃತರನ್ನು ಪ್ರಕಟಿಸಲಾಗಿದ್ದು, ಈ ಬಾರಿ ಹಿರಿಯ ಪತ್ರಕರ್ತರಾದ ಡಾ. ಯು.ಬಿ. ರಾಜಲಕ್ಷ್ಮಿ ಅವರಿಗೆ ಪ್ರಶಸ್ತಿ ಲಭಿಸಿದೆ.

ಡಾ. ಯು.ಬಿ. ರಾಜಲಕ್ಷ್ಮಿ ಕಳೆದ 37 ವರ್ಷಗಳಿಂದ ಪತ್ರಿಕಾರಂಗದಲ್ಲಿದ್ದಾರೆ. ಉಡುಪಿಯ ಜಿಲ್ಲೆಯ ಕಾರ್ಕಳದವರಾದ ಇವರು ಹೊಸ ದಿಗಂತ, ಮುಂಗಾರು, ಟೈಮ್ಸ್ ಆಫ್ ಡೆಕ್ಕನ್ ದಿನಪತ್ರಿಕೆಗಳಲ್ಲಿ ಕೆಲಸ ಮಾಡಿದ್ದಾರೆ. 1987ರಲ್ಲಿ ತರಂಗ ವಾರ ಪತ್ರಿಕೆಯಲ್ಲಿ ಸೇವೆ ಆರಂಭಿಸಿ ಈಗ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. 

ಮೈಸೂರು ವಿವಿಯಲ್ಲಿ ಕನ್ನಡ ಎಂ.ಎ ಮತ್ತು ಪತ್ರಿಕೋದ್ಯಮದಲ್ಲಿ ಡಿಪ್ಲೋಮಾ ಪಡೆದು ಹಂಪಿ ವಿವಿಯಲ್ಲಿ ಡಾಕ್ಟರೇಟ್ ಪಡೆದಿದ್ದಾರೆ. ಹಲವು ಕೃತಿಗಳನ್ನು ರಚಿಸಿರುವ ಇವರು ಸಾಕ್ಷ್ಯಚಿತ್ರಗಳನ್ನೂ ನಿರ್ದೇಶಿಸಿದ್ದಾರೆ. ಮಲೇಷ್ಯಾ ಸರಕಾರದ ಆಹ್ವಾನದ ಮೇಲೆ ಅಧ್ಯಯನ ಪ್ರವಾಸ ಕೈಗೊಂಡಿದ್ದರು. ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ಭರತನಾಟ್ಯಗಳಲ್ಲಿ ಪರಿಣತಿ ಹೊಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News