ದಿನದ 24 ಗಂಟೆಯೂ ಬಸ್, ಕ್ಯಾಬ್ ಸಂಚಾರಕ್ಕೆ ರಾಜ್ಯ ಸರಕಾರ ಅನುಮತಿ

Update: 2020-06-05 18:15 GMT

ಬೆಂಗಳೂರು, ಜೂ.5: ಕೊರೋನ ಹಿನ್ನೆಲೆಯಲ್ಲಿ ಹೇರಲಾಗಿದ್ದ ಲಾಕ್‍ಡೌನ್‍ಅನ್ನು ಮತ್ತಷ್ಟು ಸಡಿಲ ಮಾಡಲಾಗಿದ್ದು ಇನ್ನು ಮುಂದೆ ರಾಜ್ಯದಲ್ಲಿ ಬಸ್, ಕ್ಯಾಬ್ ರಾತ್ರಿಯೂ ಸಂಚರಿಸಲಿವೆ ಎಂದು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಇನ್ನು ಮುಂದೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೂ ಬಸ್, ಟ್ಯಾಕ್ಸಿಗಳಲ್ಲಿ ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಉಳಿದ ಕಡೆ ಸಂಚರಿಸಬಹುದು. ಪ್ರಯಾಣಿಕರು ಹೊಂದಿರುವಂತಹ ಬಸ್ ಟಿಕೆಟ್ ಆಧಾರದ ಮೇಲೆ ಬಸ್ ನಿಲ್ದಾಣಗಳಿಗೆ ಹೋಗಲು ಮತ್ತು ಬಸ್ ನಿಲ್ದಾಣದಿಂದ ಮನೆಗಳಿಗೆ ಹೋಗಲು ಅನುಮತಿ ನೀಡಲಾಗಿದೆ ಎಂದು ಮುಖ್ಯ ಕಾರ್ಯದರ್ಶಿ ಟಿಎಂ ವಿಜಯಭಾಸ್ಕರ್ ಆದೇಶ ಹೊರಡಿಸಿದ್ದಾರೆ.

ಗುರುವಾರ ಹೊರಡಿಸಲಾಗಿರುವ ಆದೇಶದಲ್ಲಿ ಕರ್ಫ್ಯೂ ಅವಧಿಯಲ್ಲಿ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ಮತ್ತು ಆಟೋ, ಟ್ಯಾಕ್ಸಿ ಮತ್ತು ಕ್ಯಾಬ್‍ಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿಷೇಧವನ್ನು ತೆರವುಗೊಳಿಸಿದ್ದು, ಆಟೋ, ಟ್ಯಾಕ್ಸಿ ಮತ್ತು ಕ್ಯಾಬ್‍ಗಳು ಪ್ರಯಾಣಿಕರನ್ನು ಬಸ್ ನಿಲ್ದಾಣ ಹಾಗೂ ಕೆಲವು ಪಿಕ್‍ಅಪ್ ಪಾಯಿಂಟ್‍ಗಳಲ್ಲಿ ಕರೆದೊಯ್ಯಲು ಮತ್ತು ಕರೆತರಲು ಸಹ ಅನುಮತಿ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News