ಕಾರ್ಮಿಕರ ಕೆಲಸದ ಅವಧಿ ಹೆಚ್ಚಳ ವಿಚಾರ: ಉತ್ತರಿಸಲು ಹೈಕೋರ್ಟ್ ಗೆ ಕಾಲಾವಕಾಶ ಕೇಳಿದ ಸರಕಾರ

Update: 2020-06-06 11:26 GMT

ಬೆಂಗಳೂರು, ಜೂ.6: ಕಾರ್ಖಾನೆಗಳಲ್ಲಿ ಕಾರ್ಮಿಕರ ಕೆಲಸದ ಅವಧಿ ಹೆಚ್ಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿ ಸಂಬಂಧ ಉತ್ತರಿಸಲು ರಾಜ್ಯ ಸರಕಾರ ಹೈಕೋರ್ಟ್ ಗೆ ಕಾಲಾವಕಾಶ ಕೇಳಿದೆ.

ಈ ಕುರಿತು ಬೆಂಗಳೂರಿನ ದೀಪಾಂಜಲಿ ನಗರದ ನಿವಾಸಿ ಎಚ್.ಮಾರುತಿ ಎಂಬುವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಸರಕಾರದ ಪರ ವಾದಿಸಿದ ವಕೀಲರು, ಕಾರ್ಮಿಕರ ಕೆಲಸದ ಅವಧಿಗೆ ಸಂಬಂಧಿಸಿದಂತೆ ಸರಕಾರದ ಆಂತರಿಕ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ಹೀಗಾಗಿ, ಈ ವಿಚಾರದ ಬಗ್ಗೆ ನ್ಯಾಯಾಲಯಕ್ಕೆ ಉತ್ತರಿಸಲು ಒಂದಿಷ್ಟು ಕಾಲಾವಕಾಶಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ವಿಚಾರಣೆಯನ್ನು ಜೂ.9ಕ್ಕೆ ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News