ಪುದು ಗ್ರಾಪಂ: ಕೋವಿಡ್ - 19 ನಿಯಂತ್ರಣ ಬಗ್ಗೆ ಸಭೆ

Update: 2020-06-06 11:46 GMT

ಬಂಟ್ವಾಳ, ಜೂ. 6: ಪುದು ಗ್ರಾಮದಲ್ಲಿ ಕೋವಿಡ್-19 ನಿಯಂತ್ರಣ ಕಾರ್ಯಗಳ ನಿರ್ವಹಣೆ ಹಾಗೂ ಮೇಲ್ವಿಚಾರಣೆಯ ಕುರಿತ ಸಭೆ ಪುದು ಗ್ರಾಮ ಪಂಚಾಯತ್ ಅಧ್ಯಕ್ಷ ರಮ್ಲಾನ್ ಮಾರಿಪಳ್ಳ ಅಧ್ಯಕ್ಷತೆಯಲ್ಲಿ ಶನಿವಾರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. 

ಸಭೆಯಲ್ಲಿ ಆಶಾ ಕಾರ್ಯಕರ್ತೆಯರು ಪಾಲ್ಗೊಂಡಿದ್ದು ಕ್ವಾರಂಟೈನ್‌ನಲ್ಲಿ ಇರುವವರ ಕುರಿತು ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಯಿತು. ಜತೆಗೆ ಮಳೆಗಾಲದ ಹಿನ್ನೆಲೆಯಲ್ಲಿ ಇತರ ಸಾಂಕ್ರಾಮಿಕ ರೋಗಗಳ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲಾಯಿತು. 

ಸಭೆಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆನಂದ್, ಕಾರ್ಯದರ್ಶಿ ಅಶ್ವಿನಿ, ಗ್ರಾಮಕರಣಿಕೆ ನವ್ಯಾ ಉಪಸ್ಥಿತರಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News