ಆರು ಐಎಎಸ್ ಅಧಿಕಾರಿಗಳನ್ನು ವರ್ಗಾಯಿಸಿ ರಾಜ್ಯ ಸರಕಾರ ಆದೇಶ

Update: 2020-06-06 17:18 GMT

ಬೆಂಗಳೂರು, ಜೂ.6: ರಾಜ್ಯ ಸರಕಾರವು ಆರು ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶನಿವಾರ ಆದೇಶ ಹೊರಡಿಸಿದೆ.

ಕಾರ್ಮಿಕ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ರಾಜ್‍ಕುಮಾರ್ ಖತ್ರಿ ಅವರನ್ನು ಕೃಷಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ.

ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಗಂಗಾರಾಮ್ ಬಡೇರಿಯಾರನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಆಗಿ ವರ್ಗಾವಣೆ ಮಾಡಲಾಗಿದ್ದು, ಹಾಲಿ ಹುದ್ದೆಯಲ್ಲಿ ಅವರನ್ನು ಪ್ರಭಾರಿಯನ್ನಾಗಿ ಮುಂದುವರಿಸಲಾಗಿದೆ.

ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್ ಅವರನ್ನು ಕಂದಾಯ ಇಲಾಖೆಯಲ್ಲಿನ (ವಿಕೋಪ ನಿರ್ವಹಣೆ, ಭೂಮಿ ಮತ್ತು ಯುಪಿಓಆರ್) ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ಪ್ರಭಾರದಲ್ಲಿರಿಸಲಾಗಿದೆ.

ಪ್ರವಾಸೋದ್ಯಮ ಇಲಾಖೆಯ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ಅವರನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ(ವೈದ್ಯಕೀಯ ಶಿಕ್ಷಣ) ಪ್ರಧಾನ ಕಾರ್ಯದರ್ಶಿಯನ್ನಾಗಿ ಪ್ರಭಾರದಲ್ಲಿರಿಸಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಮುಹಮ್ಮದ್ ಮೊಹ್ಸಿನ್ ಅವರನ್ನು ಪುನರ್ವಸತಿ ಇಲಾಖೆಯ ಕಾರ್ಯದರ್ಶಿ ಹಾಗೂ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ. ಕೃಷಿ ಇಲಾಖೆಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾರನ್ನು ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಕಾರ್ಯದರ್ಶಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.

ಕೆಎಎಸ್: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ ವಿಶೇಷ ಜಿಲ್ಲಾಧಿಕಾರಿ(ಭೂ ಸ್ವಾಧೀನ) ಕೆಎಎಸ್ ಅಧಿಕಾರಿ ನಾಗೇಂದ್ರ ಪ್ರಸಾದ್ ಕೆ. ಅವರನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ವೈದ್ಯಕೀಯ ಶಿಕ್ಷಣ ಸಚಿವರ ಆಪ್ತ ಕಾರ್ಯದರ್ಶಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಥವಾ ಸಚಿವರ ಪದಾವಧಿಯವರೆಗೆ ವರ್ಗಾಯಿಸಿ ನೇಮಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News