ಕಿರುತರೆ ನಟಿ ಆತ್ಮಹತ್ಯೆ ಪ್ರಕರಣ: ಆರೋಪಿ ಬಂಧನ
Update: 2020-06-07 18:32 IST
ಬೆಂಗಳೂರು, ಜೂ.7: ಕಿರುತೆರೆ ನಟಿ ಆತ್ಮಹತ್ಯೆ ಪ್ರಕರಣ ಸಂಬಂಧ ಯುವಕನೋರ್ವನನ್ನು ಇಲ್ಲಿನ ಸುದ್ದಗುಂಟೆ ಠಾಣಾ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ದಿನೇಶ್ ಬಂಧಿತ ಆರೋಪಿಯಾಗಿದ್ದು, ಇಲ್ಲಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟ್‍ನಲ್ಲಿ ಮೇ 28ರಂದು ಕಿರುತೆರೆ ನಟಿ ಚಂದನಾ (29) ಆತ್ಮಹತ್ಯೆ ಮಾಡಿಕೊಂಡ ನಂತರ ಆರೋಪಿ ದಿನೇಶ್ ಪರಾರಿಯಾಗಿದ್ದನು.
ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆ ಕೈಗೊಂಡ ಸುದ್ದಗುಂಟೆಪಾಳ್ಯ ಪೊಲೀಸರಿಗೆ ಆರೋಪಿ ದಿನೇಶ್ ಚಿಕ್ಕಮಗಳೂರು ಕಾಡಿನಲ್ಲಿ ಸಿಕ್ಕಿಬಿದ್ದಿದ್ದಾನೆ ಎಂದು ಡಿಸಿಪಿ ಶ್ರೀನಾಥ್ ಜೋಷಿ ಮಹದೇವ್ ತಿಳಿಸಿದ್ದಾರೆ.