×
Ad

ಕಾಶ್ಮೀರ: ಎನ್‌ಕೌಂಟರ್‌ನಲ್ಲಿ ಮೂವರು ಉಗ್ರರ ಹತ್ಯೆ

Update: 2020-06-07 20:03 IST

ಶ್ರೀನಗರ,ಜೂ.7: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ರೆಬಾನ್ ಪ್ರದೇಶದಲ್ಲಿ ರವಿವಾರ ಭದ್ರತಾ ಪಡೆಗಳೊಂದಿಗಿನ ಗುಂಡಿನ ಕಾಳಗದಲ್ಲಿ ಮೂವರು ಅಪರಿಚಿತ ಉಗ್ರರು ಕೊಲ್ಲಲ್ಪಟ್ಟಿದ್ದಾರೆ.

ರೆಬಾನ್‌ನಲ್ಲಿ ಉಗ್ರರ ಅಸ್ತಿತ್ವದ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆದಿದ್ದ ಭದ್ರತಾ ಪಡೆಗಳು ಬೆಳಿಗ್ಗೆ ಪ್ರದೇಶವನ್ನು ನಿರ್ಬಂಧಿಸಿ ಶೋಧ ಕಾರ್ಯಾಚರಣೆಯನ್ನು ಆರಂಭಿಸಿದ್ದವು. ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದ್ದು,ನಂತರ ನಡೆದ ಕಾಳಗದಲ್ಲಿ ಮೂವರು ಉಗ್ರರು ಬಲಿಯಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೋರ್ವರು ತಿಳಿಸಿದರು.

ಹತ ಉಗ್ರರ ಗುರುತು ಮತ್ತು ಅವರು ಯಾವ ಗುಂಪಿಗೆ ಸೇರಿದ್ದರು ಎನ್ನುವುದನ್ನು ತಿಳಿದುಕೊಳ್ಳಲು ಪ್ರಯತ್ನಗಳು ನಡೆಯುತ್ತಿವೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News