ಲಾಕ್‌ಡೌನ್ ನಿಯಮ ಉಲ್ಲಂಘನೆ ಆರೋಪ: ಕಾಂಗ್ರೆಸ್ ಶಾಸಕರು ತಂಗಿರುವ ರೆಸಾರ್ಟ್ ವಿರುದ್ಧ ಎಫ್‌ಐಆರ್

Update: 2020-06-07 16:30 GMT

ಅಹ್ಮದಾಬಾದ್, ಜೂ.7: ಶಾಸಕರ ‘ಕುದುರೆ ವ್ಯಾಪಾರ’ದ ಭೀತಿಯ ಹಿನ್ನೆಲೆಯಲ್ಲಿ ರಾಜ್‌ಕೋಟ್ ಜಿಲ್ಲೆಯ ರೆಸಾರ್ಟ್‌ಗೆ ಕಾಂಗ್ರೆಸ್ ಶಾಸಕರನ್ನು ಸ್ಥಳಾಂತರಿಸಲಾಗಿದ್ದರೆ, ಲಾಕ್‌ಡೌನ್ ನಿಯಮ ಉಲ್ಲಂಘಿಸಿದ ಆರೋಪದಡಿ ರೆಸಾರ್ಟ್‌ನ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಿಜೆಪಿಯು ಆಮಿಷವೊಡ್ಡಿ ಕಾಂಗ್ರೆಸ್ ಶಾಸಕರನ್ನು ಸೆಳೆಯಬಹುದು ಎಂಬ ಕಾರಣದಿಂದ ಕಾಂಗ್ರೆಸ್ ತನ್ನ 65 ಶಾಸಕರನ್ನು ರೆಸಾರ್ಟ್‌ಗೆ ಸ್ಥಳಾಂತರಿಸಿದ್ದು ಶನಿವಾರ ಬಹುತೇಕ ಶಾಸಕರು ರೆಸಾರ್ಟ್ ಸೇರಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಆದರೆ ಲಾಕ್‌ಡೌನ್ ಹಿನ್ನೆಲೆಯಲ್ಲಿ ಸೋಮವಾರ(ಜೂನ್ 8)ದವರೆಗೆ ಹೋಟೆಲ್ ಅಥವಾ ರೆಸ್ಟಾರೆಂಟ್‌ಗಳನ್ನು ತೆರೆಯಬಾರದು ಎಂದು ಸರಕಾರದ ಆದೇಶದಲ್ಲಿ ತಿಳಿಸಿರುವುದರಿಂದ, ನಿಯಮ ಉಲ್ಲಂಘಿಸಿ ಕಾಂಗ್ರೆಸ್‌ನ ಶಾಸಕರ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಟ್ಟ ನೀಲ್‌ಸಿಟಿ ರೆಸಾರ್ಟ್‌ನ ಮಾಲಕ ಮತ್ತು ಮ್ಯಾನೇಜರ್ ವಿರುದ್ಧ ಐಪಿಸಿಯ ಸೆಕ್ಷನ್ 188ರಡಿ ಎಫ್‌ಐಆರ್ ದಾಖಲಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News