×
Ad

ಕೊರೋನ ಚಿಕಿತ್ಸೆಗೆ ಪಿಪಿಇ ಕಿಟ್‍ಗಳು ಲಭ್ಯವಾಗುವಂತೆ ನೋಡಿಕೊಳ್ಳಿ: ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ

Update: 2020-06-07 23:23 IST

ಬೆಂಗಳೂರು, ಜೂ.7: ಕೊರೋನ ಚಿಕಿತ್ಸೆ ಮತ್ತು ನಿರ್ವಹಣೆಗೆ ಗುಣಮಟ್ಟದ ಪಿಪಿಇ ಕಿಟ್‍ಗಳು ರಾಜ್ಯದ ಮುಕ್ತ ಮಾರುಕಟ್ಟೆಯಲ್ಲಿ ಸಮರ್ಪಕ ಪ್ರಮಾಣದಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕೆಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಪಿಪಿಇ ಕಿಟ್‍ಗಳ ಕೊರೆತೆ ಹಾಗೂ ಗುಣಮಟ್ಟದ ವಿಚಾರವಾಗಿ ಡಾ.ರಾಜೀವ್ ಗೋಥೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಸರಕಾರಕ್ಕೆ ಈ ನಿರ್ದೇಶನ ನೀಡಿತು.

ಸದ್ಯ ಖಾಸಗಿ ಆಸ್ಪತ್ರೆ ಹಾಗೂ ಕ್ಲಿನಿಕ್‍ನಲ್ಲಿ ವೈದ್ಯರು ಪಿಪಿಇ ಕಿಟ್‍ಗಳನ್ನು ಬಳಸುವುದರಿಂದ ಇದೊಂದು ಬಹಳ ಮುಖ್ಯವಾದ ವಿಚಾರ. ಹೀಗಾಗಿ, ಗುಣಮಟ್ಟದ ಪಿಪಿಇ ಕಿಟ್‍ಗಳು ರಾಜ್ಯದ ಮುಕ್ತ ಮಾರುಕಟ್ಟೆಯಲ್ಲಿ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ಸರಕಾರಕ್ಕೆ ಸೂಚಿಸಿದ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News