ರಾಯಚೂರು ಆರ್‍ಟಿಪಿಎಸ್‍ನ 6 ಶಾಖೋತ್ಪನ್ನ ವಿದ್ಯುತ್ ಉತ್ಪಾದನಾ ಘಟಕಗಳು ಬಂದ್

Update: 2020-06-07 18:00 GMT

ರಾಯಚೂರು, ಜೂ.7: ರಾಜ್ಯಾದ್ಯಂತ ಶಾಖೋತ್ಪನ್ನ ವಿದ್ಯುತ್‍ಗೆ ಬೇಡಿಕೆ ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲೆಯ ಆರ್ ಟಿಪಿಎಸ್‍ನ 6 ಘಟಕಗಳು ಹಾಗೂ ವೈಟಿಪಿಎಸ್‍ನ ಎರಡು ಘಟಕಗಳು ಬಂದ್ ಆಗಿವೆ.

ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಿಂದ 1720 ಮೆಗಾ ವ್ಯಾಟ್ ವಿದ್ಯುತ್, ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದಿಂದ 1700 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿತ್ತು. ಆದರೆ, ಈಗ ಈ ಎಲ್ಲ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ.

ಕೇವಲ ರಾಯಚೂರು ಮಾತ್ರವಲ್ಲ, ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದಿಂದ 1600 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯನ್ನೂ ಸ್ಥಗಿತಗೊಳಿಸಲಾಗಿದೆ.

ಶಾಖೋತ್ಪನ್ನ ವಿದ್ಯುತ್ ಉತ್ಪಾದನೆ ಬದಲಾಗಿ ಪವನ ವಿದ್ಯುತ್ ಹಾಗೂ ಸೋಲಾರ್ ವಿದ್ಯುತ್ ಉತ್ಪಾದನೆ ಮಾಡುವತ್ತ ಗಮನ ಹೆಚ್ಚಿಸಲಾಗಿದೆ. ಅಷ್ಟೇ ಅಲ್ಲದೆ, ಶಾಖೋತ್ಪನ್ನ ವಿದ್ಯುತ್ ಕೇಂದ್ರದಿಂದ ಪರಿಸರ ಸಂರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಈ ಕಾರಣದಿಂದಲೂ ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News