ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ರೌಡಿಯ ಕೊಲೆ

Update: 2020-06-07 18:36 GMT

ಬೆಂಗಳೂರು, ಜೂ.7: ಇತ್ತೀಚಿಗಷ್ಟೆ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ ರೌಡಿಯೋರ್ವನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಎಚ್‍ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಎಚ್‍ಎಎಲ್‍ನ ಎಲ್‍ಬಿಎಸ್ ನಗರದ ನಿವಾಸಿ ಅರವಿಂದ್ ಯಾನೆ ಪಾಗಲ್ ಸೀನ(27) ಕೊಲೆಯಾಗಿರುವ ರೌಡಿ ಎಂದು ಪೊಲೀಸರು ತಿಳಿಸಿದ್ದಾರೆ.

ಗಂಭೀರ ಅಪರಾಧ ಪ್ರಕರಣವೊಂದರಲ್ಲಿ ಜೈಲಿಗೆ ಹೋಗಿ ಎರಡು ವಾರಗಳ ಹಿಂದಷ್ಟೇ ಬಿಡುಗಡೆಯಾಗಿ ಬಂದಿದ್ದ ಅರವಿಂದ್, ಶನಿವಾರ ರಾತ್ರಿ ಮನೆಯಲ್ಲಿ ಸ್ನೇಹಿತರ ಜತೆ ಮದ್ಯ ಸೇವನೆ ಮಾಡಿದ್ದಾನೆ. ಈ ವೇಳೆ ಮದ್ಯದ ಅಮಲಿನಲ್ಲಿ ಗಲಾಟೆ ನಡೆದು ಅರವಿಂದ್‍ನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿದ್ದಾರೆ ಎಂದು ವೈಟ್‍ಫೀಲ್ಡ್ ಡಿಸಿಪಿ ಎಂ.ಎನ್.ಅನುಚೇತ್ ತಿಳಿಸಿದ್ದಾರೆ.

ಆರೋಪಿಯು ಜೆಪಿ ನಗರದ ಪೊಲೀಸ್ ಠಾಣೆಯ ರೌಡಿ ಪಟ್ಟಿಯಲ್ಲಿದ್ದು, ಬನಶಂಕರಿ, ಸಿದ್ದಾಪುರ, ಜೆಪಿ ನಗರ ಪೊಲೀಸ್ ಠಾಣೆಗಳ ವ್ಯಾಪ್ತಿಗಳಲ್ಲಿ ಕೊಲೆ, ಸುಲಿಗೆ, ಹಲ್ಲೆ, ಹಲ್ಲೆಯತ್ನ, ಕೊಲೆ ಯತ್ನ ಇನ್ನಿತರ ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಬೆಳಗ್ಗೆ ಕೊಲೆಯಾಗಿರುವ ಬಗ್ಗೆ ಮಾಹಿತಿ ಬಂದಿದ್ದು, ತಕ್ಷಣವೇ ಎಚ್‍ಎಎಲ್ ಠಾಣಾ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News