×
Ad

ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ಗೆ ಅನಾರೋಗ್ಯ, ಕೋವಿಡ್-19 ಪರೀಕ್ಷೆಗೆ ಒಳಗಾಗುವ ಸಾಧ್ಯತೆ

Update: 2020-06-08 13:13 IST

ಹೊಸದಿಲ್ಲಿ, ಜೂ.8: ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಲಘು ಜ್ವರ ಹಾಗೂ ಕೆಮ್ಮುವಿನಿಂದ ಬಳಲುತ್ತಿದ್ದಾರೆ. ಆಮ್ ಆದ್ಮಿ ಪಕ್ಷದ(ಎಎಪಿ) ಮುಖ್ಯಸ್ಥರು ಸ್ವತಃ ಐಸೋಲೇಶನ್‌ಗೆ ಒಳಗಾಗಿದ್ದು, ಕೋವಿಡ್-19 ಪರೀಕ್ಷೆಗೆ ಒಳಗಾಗಲಿದ್ದಾರೆ ಎಂದು ಪಕ್ಷದ ವಕ್ತಾರ 'ಇಂಡಿಯನ್ ಎಕ್ಸ್‌ಪ್ರೆಸ್‌'ಗೆ ತಿಳಿಸಿದ್ದಾರೆ.

 ಭಾರತದಲ್ಲಿ ಸತತ ಐದನೇ ದಿನ ದಿನವೊಂದಕ್ಕೆ 9,000ಕ್ಕೂ ಅಧಿಕ ಕೊರೋನ ವೈರಸ್ ಪ್ರಕರಣ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,56,611ಕ್ಕೆ ತಲುಪಿದೆ. ಈ ಪೈಕಿ 1,25,381 ಸಕ್ರಿಯ ಪ್ರಕರಣವಾಗಿದೆ. 1,24,094 ಜನರು ಬಿಡುಗಡೆಯಾಗಿದ್ದಾರೆ. ಸಾವನ್ನಪ್ಪಿದವರ ಸಂಖ್ಯೆ 7,135ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರ ವೈರಸ್‌ನಿಂದ ಹೆಚ್ಚು ಬಾಧಿತವಾಗಿರುವ ರಾಜ್ಯವಾಗಿದೆ. ಮಹಾರಾಷ್ಟ್ರದಲ್ಲಿ ಒಟ್ಟು 85,975 ಪ್ರಕರಣಗಳು ದಾಖಲಾಗಿದ್ದು, ಮಹಾರಾಷ್ಟ್ರವು ಕೊರೋನದ ಉಗಮ ಸ್ಥಾನ ಚೀನಾ(84,191 ಕೇಸ್‌ಗಳು)ವನ್ನು ಹಿಂದಿಕ್ಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News