ಸೋನಿಯಾ ಗಾಂಧಿ ಕೋರಿಕೆ ಹಿನ್ನೆಲೆ: ರಾಜ್ಯಸಭಾ ಚುನಾವಣೆಗೆ ದೇವೇಗೌಡ ಸ್ಪರ್ಧೆ

Update: 2020-06-08 09:49 GMT

ಬೆಂಗಳೂರು ಜೂ 8: ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಜೂನ್ 19ರಂದು ಕರ್ನಾಟಕದಿಂದ ನಡೆಯುವ ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದಾರೆ. ಮಂಗಳವಾರ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ ಎಂದು ಅವರ ಪುತ್ರ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೋಮವಾರ ಹೇಳಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ,ಹಲವು ರಾಷ್ಟ್ರೀಯ ನಾಯಕರು ಹಾಗೂ ಪಕ್ಷದ ಶಾಸಕರ ಕೋರಿಕೆಯ ಮೇರೆಗೆ ಮಾಜಿ ಪ್ರಧಾನಮಂತ್ರಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ರಾಜ್ಯಸಭೆಗೆ ಪ್ರವೇಶಿಸಲು ತಂದೆಯವರ  ಮನವೊಲಿಸುವ ಪ್ರಯತ್ನ ಸುಲಭವಾಗಿರಲಿಲ್ಲ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಜೆಡಿಎಸ್ ವಿಧಾನಸಭೆಯಲ್ಲಿ 34 ಸದಸ್ಯರನ್ನು ಹೊಂದಿದ್ದು ಸ್ವಂತ ಬಲದಲ್ಲಿ ರಾಜ್ಯಸಭಾ ಸ್ಥಾನವನ್ನು ಗೆಲ್ಲುವ ಸ್ಥಿತಿಯಲ್ಲಿಲ್ಲ. ಅದಕ್ಕೆ ಕಾಂಗ್ರೆಸ್‌ನ ಹೆಚ್ಚುವರಿ ಮತಗಳ ಬೆಂಬಲದ ಅಗತ್ಯವಿದೆ. ರಾಜ್ಯಸಭಾ ಅಭ್ಯರ್ಥಿಗೆ ಗೆಲುವು ಸಾಧಿಸಲು 44 ಮತಗಳ ಅಗತ್ಯವಿದೆ.

ಒಂದು ವೇಳೆ ದೇವೆಗೌಡರು ಗೆಲುವು ಸಾಧಿಸಿದರೆ ಎರಡನೇ ಬಾರಿಗೆ ರಾಜ್ಯಸಭೆಗೆ ಪ್ರವೇಶಿಸಿದಂತಾಗುತ್ತದೆ. 1996ರಲ್ಲಿ ಮೊದಲ ಬಾರಿಗೆ ರಾಜ್ಯಸಭಾ ಸದಸ್ಯರಾಗಿ ಪ್ರಧಾನಮಂತ್ರಿ ಹುದ್ದೆಗೇರಿದ್ದರು. 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ 87ರ ಹರೆಯದ ದೇವೆಗೌಡರು ತುಮಕೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜ್ ವಿರುದ್ಧ 13,000ಕ್ಕೂ ಅಧಿಕ ಮತಗಳಿಂದ ಸೋತಿದ್ದರು. .

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News