×
Ad

ಸಾರಿಗೆ ಬಸ್‍ಗಳಲ್ಲಿ ಹಿರಿಯ ನಾಗರಿಕರ ಪ್ರಯಾಣಕ್ಕೆ ರಾಜ್ಯ ಸರಕಾರ ಅನುಮತಿ

Update: 2020-06-08 20:19 IST

ಬೆಂಗಳೂರು, ಜೂ.8: ಕೋವಿಡ್-19 ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‍ಗಳಲ್ಲಿ ಹಿರಿಯ ನಾಗರಿಕರ ಪ್ರಯಾಣಕ್ಕೆ ನಿಷೇಧ ಏರಲಾಗಿತ್ತು. ಈಗ ರಾಜ್ಯ ಸರಕಾರ ಆದೇಶವನ್ನು ಹಿಂಪಡೆದಿದ್ದು, ಎಲ್ಲ ಹಿರಿಯ ನಾಗರಿಕರಿಗೂ ಸಾರಿಗೆ ಬಸ್‍ಗಳಲ್ಲಿ ಮುಕ್ತ ಪ್ರಯಾಣಕ್ಕೆ ಅನುಮತಿ ನೀಡಲಾಗಿದೆ.

ಹಿರಿಯ ನಾಗರಿಕರಿಗೆ ಪ್ರಯಾಣ ದರದಲ್ಲಿ ಹಾಗೂ ಸಾಮಾನ್ಯ ಮಾಸಿಕ ಪಾಸಿನಲ್ಲಿ ರಿಯಾಯಿತಿಯನ್ನು ಮುಂದುವರಿಸಲಾಗಿದೆ. ಈ ಬಗ್ಗೆ ಎಲ್ಲ ಚಾಲನಾ ಸಿಬ್ಬಂದಿಗಳಿಗೆ ಮಾಹಿತಿ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಸ್ಥೆಯ ಎಲ್ಲ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ಘಟಕ ವ್ಯವಸ್ಥಾಪಕರಿಗೆ ಸೂಚಿಸಲಾಗಿದೆ ಎಂದು ಬಿಎಂಟಿಸಿಯ ಸಂಚಾರ ವ್ಯವಸ್ಥಾಪಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News