ಜೂನ್ 10ರಿಂದ ರಾಮಮಂದಿರ ನಿರ್ಮಾಣ ಕಾರ್ಯ ಆರಂಭ

Update: 2020-06-08 16:14 GMT

ಲಕ್ನೋ, ಜೂ.8: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಜೂನ್ 10ರಿಂದ ಆರಂಭವಾಗಲಿದೆ ಎಂದು ದೇವಸ್ಥಾನ ಟ್ರಸ್ಟ್‌ನ ಮುಖ್ಯಸ್ಥರ ವಕ್ತಾರರು ಹೇಳಿದ್ದಾರೆ.

ರಾಮಜನ್ಮಭೂಮಿ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಶಿವನಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ ಶಿಲಾನ್ಯಾಸ ಕಾರ್ಯಕ್ಕೆ ಚಾಲನೆ ನೀಡಲಾಗುವುದು. ಲಂಕಾದ ಮೇಲೆ ದಾಳಿ ಆರಂಭಿಸುವ ಮೊದಲು ಶ್ರೀರಾಮನೂ ಶಿವನಿಗೆ ರುದ್ರಾಭಿಷೇಕ ನಡೆಸಿ ಪ್ರಾರ್ಥಿಸಿದ್ದ ಎಂಬ ನಂಬಿಕೆಯ ಹಿನ್ನೆಲೆಯಲ್ಲಿ ಹೀಗೆ ಮಾಡಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಾಂತ ನೃತ್ಯಗೋಪಾಲ ದಾಸ್‌ರ ವಕ್ತಾರ ಮಹಾಂತ ಕಮಲ ನಯನ ದಾಸ್ ಹೇಳಿದ್ದಾರೆ.

ಬೆಳಿಗ್ಗೆ 8ರಿಂದ ಕಾರ್ಯಕ್ರಮ ಆರಂಭವಾಗಲಿದೆ. ಕಮಲನಯನ ದಾಸ್ ಹಾಗೂ ಇತರ ಸಂತರು ಪ್ರಾರ್ಥನೆ ನಡೆಸಲಿದ್ದಾರೆ. ವಿಶೇಷ ಪ್ರಾರ್ಥನೆಯ ಬಳಿಕ ಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್ ಸೂಚಿಸಿದ ಸ್ಥಳದಲ್ಲಿ ಶಿಲಾನ್ಯಾಸ ನಡೆಯಲಿದೆ ಎಂದು ಟ್ರಸ್ಟ್‌ನ ಹೇಳಿಕೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News