×
Ad

ಚಿಕಾಗೋದಿಂದ ಬೆಂಗಳೂರಿಗೆ ಆಗಮಿಸಿದ 231 ಅನಿವಾಸಿ ಭಾರತೀಯರು

Update: 2020-06-09 00:11 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.8: ಲಾಕ್ ಡೌನ್ ಹಿನ್ನೆಲೆಯಲ್ಲಿ ಅಮೆರಿಕಾದ ಚಿಕಾಗೋದಿಂದ ಸೋಮವಾರ ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 29ನೇ ಏರ್ ಇಂಡಿಯಾ ವಿಮಾನದಲ್ಲಿ 231 ಮಂದಿ ಅನಿವಾಸಿ ಭಾರತೀಯರು ಆಗಮಿಸಿದ್ದಾರೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಒಟ್ಟು 231 ಮಂದಿ ಪ್ರಯಾಣಿಕರಲ್ಲಿ 3 ಮಕ್ಕಳು 120 ಪುರುಷರು ಮತ್ತು 108 ಮಹಿಳೆಯರು ಇದ್ದಾರೆ. ತಜ್ಞ ವೈದ್ಯರು ಹಾಗೂ ಸಿಬ್ಬಂದಿಗಳು ಎಲ್ಲಾ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಿದ್ದು, ಯಾವುದೇ ಪ್ರಯಾಣಿಕರಲ್ಲಿ ಕೊರೋನ ವೈರಾಣು ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ. ಪ್ರಯಾಣಿಕರನ್ನು ಕ್ವಾರಂಟೈನ್‍ಗೆ ಕಳುಹಿಸಿಕೊಡಲಾಯಿತು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News