×
Ad

ಕಾಶ್ಮೀರ: ಉಗ್ರರಿಂದ ಸರಪಂಚ್ ಹತ್ಯೆ

Update: 2020-06-09 09:08 IST

ಶ್ರೀನಗರ, ಜೂ.9: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಉಗ್ರಗಾಮಿಗಳು ಸರಪಂಚ್ ಒಬ್ಬರನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ.

ಅನಂತನಾಗ್ ಜಿಲ್ಲೆಯ ಲರ್ಕಿಪುರ ಗ್ರಾಮದ ಮುಖ್ಯಸ್ಥ ಹಾಗೂ ಕಾಂಗ್ರೆಸ್ ಸದಸ್ಯರಾಗಿದ್ದ ಅಜಯ್ ಪಂಡಿತ್ ಅವರನ್ನು ಸೋಮವಾರ ಸಂಜೆ 6ರ ವೇಳೆಗೆ ಸ್ವಗ್ರಾಮದಲ್ಲಿ ಗುಂಡಿಟ್ಟು ಕೊಂದಿದ್ದಾರೆ.

ತೀವ್ರ ಗಾಯಗಳಾಗಿದ್ದ ಪಂಡಿತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟರು. ಪಂಡಿತ್ ಹತ್ಯೆ ಘಟನೆಯನ್ನು ಖಂಡಿಸಿರುವ ಕಾಂಗ್ರೆಸ್ ವಕ್ತಾರರು, ಪಂಡಿತ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದರು ಎಂದು ಬಣ್ಣಿಸಿದ್ದಾರೆ. ಈ ಹತ್ಯೆಯ ಹೊಣೆಯನ್ನು ಯಾವುದೇ ಉಗ್ರ ಸಂಘಟನೆ ಇದುವರೆಗೆ ಹೊತ್ತಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News