×
Ad

ರಾಜ್ಯಸಭೆ ಚುನಾವಣೆ: ದೇವೇಗೌಡರಿಂದ ನಾಮಪತ್ರ ಸಲ್ಲಿಕೆ

Update: 2020-06-09 13:26 IST

ಬೆಂಗಳೂರು, ಜೂ.9: ಈ ತಿಂಗಳ 19ರಂದು ನಡೆಯಲಿರುವ ರಾಜ್ಯ ಸಭೆ ಚುನಾವಣೆಗೆ ಸ್ಪರ್ಧಿಸಲು ಜಾತ್ಯತೀತ ಜನತಾದಳದ ಅಭ್ಯರ್ಥಿಯಾಗಿ ಪಕ್ಷದ ವರಿಷ್ಠ, ಮಾಜಿ ಪ್ರಧಾನ ಮಂತ್ರಿ ಎಚ್.ಡಿ. ದೇವೇಗೌಡ ಮಂಗಳವಾರ ನಾಮಪತ್ರ ಸಲ್ಲಿಸಿದರು.

ವಿಧಾನಸಭೆಯ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿಯಾಗಿರುವ ವಿಶಾಲಾಕ್ಷಿ ಅವರಿಗೆ ದೇವೇಗೌಡ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪಕ್ಷದ ಅಧ್ಯಕ್ಷ ಕುಮಾರಸ್ವಾಮಿ ಶಾಸಕರಾದ ಎಚ್.ಡಿ.ರೇವಣ್ಣ , ಬಂದಪ್ಪಖಾಶಂಪೂರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News