ಜೂ.30ರವರೆಗೆ ಮಸೀದಿಗಳಲ್ಲಿ ಸಾಮೂಹಿಕ ನಮಾಝ್ ಬೇಡ: ಮುಸ್ಲಿಂ ಸೆಂಟ್ರಲ್ ಕಮಿಟಿ ಮನವಿ

Update: 2020-06-09 09:46 GMT

ಮಂಗಳೂರು, ಜೂ.9: ಕೊರೋನ ವೈರಸ್ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೂ.30ರವರೆಗೆ ಮಸೀದಿಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸುವುದು ಬೇಡ ಎಂದು ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆಎಸ್ ಮುಹಮ್ಮದ್ ಮಸೂದ್ ಮನವಿ ಮಾಡಿದ್ದಾರೆ.

ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರದ ಸೂಚನೆಯ ಮೇರೆಗೆ ಕೆಲವು ನಿಬಂಧನೆಗಳೊಂದಿಗೆ ಜ. 8ರಿಂದ ಕೆಲವು ಮಸೀದಿಗಳಲ್ಲಿ ನಮಾಝ್ ನಿರ್ವಹಿಸಲಾಗುತ್ತಿದೆ. ಆದರೆ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಕೊರೋನ ಹಾವಳಿ ಹೆಚ್ಚುತ್ತಲೇ ಇದೆ. ಅಲ್ಲದೆ ಸರಕಾರದ ನಿಬಂಧನೆಯನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಕಷ್ಟವಾಗುವುದರಿಂದ ಜೂ.30ರವರೆಗೆ ಮಸೀದಿಗಳಲ್ಲಿ ಸಾಮೂಹಿಕ ನಮಾಝ್ ನಿರ್ವಹಿಸುವುದು ಬೇಡ. ಲಾಕ್‌ಡೌನ್ ಅವಧಿಯಲ್ಲಿದ್ದಂತೆ ಆಝಾನ್ ಹಾಗೂ ನಮಾಝನ್ನು ಮುಂದುವರಿಸಿಕೊಂಡು ಹೋಗುವುದು ಒಳಿತು. ಜೂ.30ರ ಬಳಿಕ ಸರಕಾರದ ಆದೇಶವನ್ನು ಗಮನಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಮುಹಮ್ಮದ್ ಮಸೂದ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News