×
Ad

ರಾಜ್ಯಸಭೆ ಅಭ್ಯರ್ಥಿಗಳ ಆಯ್ಕೆ: ವರಿಷ್ಠರ ತೀರ್ಮಾನಕ್ಕೆ ಸ್ವಾಗತ- ಸಿಎಂ ಯಡಿಯೂರಪ್ಪ

Update: 2020-06-09 16:13 IST

ಬೆಂಗಳೂರು, ಜೂ.9: ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ವರಿಷ್ಠರು ಕೈಗೊಂಡಿರುವ ತೀರ್ಮಾನವನ್ನು ಸ್ವಾಗತಿಸುತ್ತೇನೆ. ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶಗಳು ಸಿಗುತ್ತದೆ ಎಂಬುದಕ್ಕೆ ಇದು ಸಾಕ್ಷಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ವಿಚಾರದಲ್ಲಿ ಪಕ್ಷದ ವರಿಷ್ಠರು ನನ್ನ ಜೊತೆ ಚರ್ಚೆ ನಡೆಸಿದ್ದರು. ಕೋರ್ ಕಮಿಟಿ ಸಭೆಯಲ್ಲಿ ನಾವು ಕೆಲವರ ಹೆಸರನ್ನು ಚರ್ಚೆ ಮಾಡಿದ್ದೆವು ಎಂದರು.

ಆದರೆ, ಸಾಮಾನ್ಯ ಕಾರ್ಯಕರ್ತರ ಹೆಸರು ಕೊಡಿ ಎಂದು ಸಂಸದೀಯ ಮಂಡಳಿ ನೀಡಿದ ಸೂಚನೆ ಹಿನ್ನೆಲೆಯಲ್ಲಿ, ಸಾಮಾನ್ಯ ಕಾರ್ಯಕರ್ತರ ಹೆಸರನ್ನು ಕಳುಹಿಸಿಕೊಡಲಾಗಿತ್ತು. ಕೇವಲ ನಮ್ಮ ರಾಜ್ಯದಷ್ಟೆ ಅಲ್ಲ, ಬೇರೆ ಕಡೆಯು ಇದೇ ರೀತಿ ಸಾಮಾನ್ಯ ಕಾರ್ಯಕರ್ತರಿಗೆ ಅವಕಾಶ ನೀಡುವ ತೀರ್ಮಾನ ಮಾಡಿರುವುದನ್ನು ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News