×
Ad

ರಾಜ್ಯದ ಕರಾವಳಿಯಲ್ಲಿ ಜೂ.11 ರಿಂದ ಭಾರೀ ಮಳೆ ಸಾಧ್ಯತೆ: ‘ಆರೆಂಜ್ ಅಲರ್ಟ್’ ಘೋಷಣೆ

Update: 2020-06-09 16:21 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.9: ರಾಜ್ಯದ ಕರಾವಳಿ ವ್ಯಾಪ್ತಿಯಲ್ಲಿ ಜೂ.11 ಹಾಗೂ 12 ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.

ಜೂ.11ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ ಜೂ.12ರಿಂದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ ಜಿಲ್ಲೆ ಹಾಗೂ ಸುತ್ತಮುತ್ತಲಿನಲ್ಲಿ ಕನಿಷ್ಠ 5 ಸೆಂ.ಮೀ ಮಳೆಯಾಗುತ್ತಿದೆ. ಹೀಗಾಗಿ, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News