ಚೀನಾವು ಭಾರತದ ಪ್ರದೇಶವನ್ನು ಅತಿಕ್ರಮಿಸಿದೆಯೇ ?: ರಕ್ಷಣಾ ಸಚಿವರಿಗೆ ರಾಹುಲ್ ಗಾಂಧಿ ಪ್ರಶ್ನೆ

Update: 2020-06-09 17:25 GMT

ಹೊಸದಿಲ್ಲಿ, ಜೂ.9: ಗಡಿಭಾಗದಲ್ಲಿ ಚೀನಾದೊಂದಿಗೆ ಉದ್ಭವಿಸಿರುವ ಬಿಕ್ಕಟ್ಟಿನ ಬಗ್ಗೆ ಮತ್ತೆ ಕೇಂದ್ರ ಸರಕಾರವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಚೀನಾವು ಲಡಾಖ್ ಭಾಗದಲ್ಲಿ ಭಾರತದ ಭೂಪ್ರದೇಶವನ್ನು ಅತಿಕ್ರಿಮಿಸಿದೆಯೇ ಎಂದು ಟ್ವೀಟ್ ಮಾಡಿದ್ದಾರೆ.

ಕೈ ಚಿಹ್ನೆಯ ಬಗ್ಗೆ ರಾಜ್‌ನಾಥ್ ಸಿಂಗ್ ಪ್ರತಿಕ್ರಿಯಿಸಿದ ಬಳಿಕ ಈಗ ಅವರು ಲಡಾಖ್‌ನಲ್ಲಿ ಚೀನಾ ಭಾರತದ ಭೂಪ್ರದೇಶವನ್ನು ಅತಿಕ್ರಿಮಿಸಿದೆಯೇ ಎಂಬ ಪ್ರಶ್ನೆಗೆ ಉತ್ತರಿಸುವರೇ ಎಂದು ರಾಹುಲ್ ಪ್ರಶ್ನಿಸಿದ್ದಾರೆ.

ರಾಜನಾಥ್ ಸಿಂಗ್ ಪಕ್ಷದ ಚಿಹ್ನೆಯನ್ನು ಬಳಸಿ ಟೀಕೆ ಮಾಡಿರುವುದನ್ನು ಆಕ್ಷೇಪಿಸಿರುವ ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೆವಾಲಾ, ಭಾರತದ ಸಮರ್ಥನೆ ಎಂದರೆ ಪಕ್ಷವೊಂದರ ಚಿಹ್ನೆಯನ್ನು ಹೀಯಾಳಿಸುವುದು ಎಂದಲ್ಲ. ರಾಹುಲ್ ಗಾಂಧಿ ಎತ್ತಿರುವ ಪ್ರಶ್ನೆಗೆ ರಾಜನಾಥ್ ಉತ್ತರಿಸಬೇಕು ಎಂದು ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News