×
Ad

ಎಪಿಪಿ-ಎಜಿಪಿ ನೇಮಕಾತಿ ಪ್ರಾಥಮಿಕ ಪರೀಕ್ಷೆ ಮುಂದೂಡಿಕೆ

Update: 2020-06-09 23:07 IST

ಬೆಂಗಳೂರು, ಜೂ.9: ರಾಜ್ಯದಲ್ಲಿ ಕೊರೋನ ವೈರಸ್ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಈ ಸಂಬಂಧ ಅಭ್ಯರ್ಥಿಗಳ ಮನವಿಗಳನ್ನು ಪರಿಶೀಲಿಸಲಾಗಿದೆ.

ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆಯ ಅಭಿಪ್ರಾಯದಂತೆ ಎಪಿಪಿ-ಎಜಿಪಿ ನೇಮಕಾತಿ ಸಂಬಂಧ ಜೂ.21ರಂದು ಬೆಂಗಳೂರು, ಮೈಸೂರು, ಬೆಳಗಾವಿ ಮತ್ತು ಕಲಬುರಗಿ ಕೇಂದ್ರಗಳಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಪ್ರಾಥಮಿಕ ಪರೀಕ್ಷೆಯನ್ನು ಮತ್ತೊಮ್ಮೆ ಅನಿರ್ದಿಷ್ಟಾವಧಿಯವರೆಗೆ ಮುಂದೂಡಲಾಗಿದೆ.

ಪ್ರಾಥಮಿಕ ಪರೀಕ್ಷೆಯ ಪರಿಷ್ಕೃತ ದಿನಾಂಕವನ್ನು ಮುಂದಿನ ದಿನಗಳಲ್ಲಿ ಪ್ರಾಧಿಕಾರದ ವೆಬ್‍ಸೈಟ್ http://kea.kar.nic.inನಲ್ಲಿ ಪ್ರಕಟಿಸಲಾಗುವುದು ಎಂದು ರಾಜ್ಯ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News