ಪೊಲೀಸರ ಕ್ವಾರಂಟೈನ್: ಕರ್ತವ್ಯದ ಅವಧಿ ಎಂದು ಪರಿಗಣಿಸಲು ಡಿಜಿ ಆದೇಶ

Update: 2020-06-09 18:08 GMT

ಬೆಂಗಳೂರು, ಜೂ.9: ಕೋವಿಡ್-19 ಸಂಬಂಧ ಸೋಂಕಿನ ವಿರುದ್ಧ ಹೋರಾಟ ನಡೆಸುತ್ತಿರುವ ಪೊಲೀಸರು, ಕ್ವಾರಂಟೈನ್ ಪ್ರಕ್ರಿಯೆ ಒಳಗಾದರೆ, ಅದನ್ನು ಕರ್ತವ್ಯದ ಅವಧಿ ಎಂದು ಪರಿಗಣಿಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಮಹತ್ವದ ಆದೇಶ ಹೊರಡಿಸಿದ್ದಾರೆ.

ದಿನೇ ದಿನೇ ಕೊರೋನ ಸೋಂಕಿನ ಪ್ರಕರಣಗಳು ಬೆಳಕಿಗೆ ಬರುತ್ತಿರುವ ಹಿನ್ನೆಲೆ ಕರ್ತವ್ಯ ನಿರ್ವಹಣೆ ಸಮಯದಲ್ಲಿ ಪೊಲೀಸರು ಸೋಂಕಿತರ ಜೊತೆ ಸಂಪರ್ಕಕ್ಕೆ ಬಂದಿರುತ್ತಾರೆ. ಹೀಗಾಗಿ, ಪೊಲೀಸರು ಹೋಂ ಕ್ವಾರಂಟೈನ್ ಅಥವಾ ಸಾಂಸ್ಥಿಕ ಕ್ವಾರಂಟೈನ್ ಇರುವಾಗ ಕರ್ತವ್ಯದ ಅವಧಿ ಎಂದು ಪರಿಗಣನೆ ಮಾಡಬೇಕೆಂದು ಹೇಳಿದ್ದಾರೆ

ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರು ಹಾಗೂ ತರಬೇತಿ ನಿಮಿತ್ತ ಹೊರ ರಾಜ್ಯದಿಂದ ಪ್ರಯಾಣ ಬೆಳೆಸಿದ ಸಿಬ್ಬಂದಿಗೆ ಇದು ಅನ್ವಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News