ನೇತ್ರಾವತಿ ಸೇತುವೆಯಲ್ಲಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ
Update: 2020-06-10 12:12 IST
ಮಂಗಳೂರು: ನೇತ್ರಾವತಿ ಸೇತುವೆಯ ಬಳಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ಕುರ್ನಾಡು ನಿವಾಸಿ ಪ್ರವೀಣ್ ಸಫಲ್ಯ(28) ಎಂಬವರಿಗೆ ಸೇರಿದ ಬೈಕ್ ಸ್ಥಳದಲ್ಲಿ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಇವರು ಮಂಗಳವಾರ ರಾತ್ರಿ ಕೆಲಸದಿಂದ ಮನೆಗೆ ವಾಪಸಾಗುವಾಗ ನಾಪತ್ತೆಯಾಗಿದ್ದರು.
ಪೊಲೀಸರು ಬೈಕ್ ವಶಕ್ಕೆ ಪಡೆದು, ಮನೆಮಂದಿಗೆ ಮಾಹಿತಿ ನೀಡಿದ್ದಾರೆ. ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ನೇತ್ರಾವತಿ ನದಿಯಲ್ಲಿ ಶೋಧ ಕಾರ್ಯ ನಡೆದಿದೆ.