ಈಶ್ವರಮಂಗಲ : ಪಲ್ಟಿಯಾಗಿ ಮನೆಯಂಗಳಕ್ಕೆ ಬಿದ್ದ ಕೆಎಸ್ಸಾರ್ಟಿಸಿ ಬಸ್
Update: 2020-06-10 15:53 IST
ಪುತ್ತೂರು : ಈಶ್ವರಮಂಗಲ ಸಮೀಪದ ಸಾಂತ್ಯ ಎಂಬಲ್ಲಿ ಪುತ್ತೂರಿನಿಂದ ಈಶ್ವರಮಂಗಲ ಕಡೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಪಲ್ಟಿಯಾಗಿ ಮನೊಯೊಂದರ ಅಂಗಳಕ್ಕೆ ಬಿದ್ದ ಘಟನೆ ಬುಧವಾರ ನಡೆದಿದೆ.
ಪುತ್ತೂರಿನಿಂದ ಈಶ್ವರಮಂಗಲ ಕಡೆ ಹೋಗುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಪಲ್ಟಿಯಾಗಿ 25 ಅಡಿ ಆಳದ ಮನೆಯೊಂದರ ಅಂಗಳಕ್ಕೆ ಬಿದ್ದಿದೆ. ಬಸ್ಸಿನಲ್ಲಿ ಸುಮಾರು 15 ಜನ ಪ್ರಯಾಣಿಕರಿದ್ದು ಯಾವುದೇ ಅಪಾಯ ಸಂಭವಿಸಿಲ್ಲ ಎಂದು ಹೇಳಲಾಗುತ್ತಿದೆ. ಬಸ್ಸಿನ ಚಾಲಕ ಹಾಗೂ ನಿರ್ವಾಹಕನಿಗೆ ಸಣ್ಣ ಪುಟ್ಟ ಗಾಯವಾಗಿದೆ ಎಂದು ತಿಳಿದು ಬಂದಿದೆ.