×
Ad

ವಲಸೆ ಕಾರ್ಮಿಕರ ರಕ್ಷಣೆಗೆ ಸುಪ್ರೀಂ ಕೋರ್ಟ್ ನೀಡಿದ ಆದೇಶವನ್ನು ತಕ್ಷಣ ಜಾರಿಗೊಳಿಸಿ

Update: 2020-06-10 17:15 IST

ಬೆಂಗಳೂರು, ಜೂ. 10: 'ವಲಸೆ ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಆದೇಶವನ್ನು ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಪ್ರಧಾನಿ ಮೋದಿ ತಕ್ಷಣ ಜಾರಿಗೆ ತರಲು ಮುಂದಾಗಬೇಕು' ಎಂದು ವಿಧಾನಸಭೆ ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, 'ವಲಸೆ ಕಾರ್ಮಿಕರನ್ನು ಹದಿನೈದು ದಿನಗಳಲ್ಲಿ ಊರಿಗೆ ಕಳುಹಿಸಿಕೊಡಬೇಕು. ಊರಿಗೆ ಮರಳಿದವರಿಗೆ ಉದ್ಯೋಗ ಕಲ್ಪಿಸಲು ವ್ಯವಸ್ಥೆ ಮಾಡಬೇಕು ಮತ್ತು ಅವರ ಮೇಲಿನ ಮೊಕದ್ದಮೆಗಳನ್ನು ಕೂಡಲೇ ಕೈಬಿಡಬೇಕು' ಎಂದು ಒತ್ತಾಯ ಮಾಡಿದ್ದಾರೆ.

ವಲಸೆ ಕಾರ್ಮಿಕರ ರಕ್ಷಣೆಗೆ ಮುಂದಾಗಿರುವ ಸುಪ್ರೀಂ ಕೋರ್ಟ್ ಆದೇಶವನ್ನು ಸ್ವಾಗತಿಸುತ್ತೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಈಗಲಾದರೂ ಎಚ್ಚೆತ್ತುಕೊಂಡು ಮಾನವೀಯ ದೃಷ್ಟಿಯಿಂದ ವಲಸೆ ಕಾರ್ಮಿಕರಿಗೆ ನೆರವಾಗಲು ಕಾರ್ಯ ಪ್ರವೃತ್ತರಾಗಬೇಕು' ಎಂದು ಸಿದ್ಧರಾಮಯ್ಯ ಇದೇ ವೇಳೆ ಸಲಹೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News